ಮಡಿಕೇರಿ ಜ.16 NEWS DESK : ಗೋ ಸಂರಕ್ಷಣಾ ಸಂವರ್ಧನಾ ಸಮಿತಿ ವತಿಯಿಂದ ಜ.17 ರಂದು ಜನಜಾಗೃತಿ ಸಭೆ ನಡೆಯಲಿದೆ. ಬೆಳಿಗ್ಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾಗೃತಿ ನಡೆಯಲಿದ್ದು, ನಂತರ ಸಭೆ ನಡೆಯಲಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.
ಪ್ರತಿಭಟನೆ :: ಚಾಮರಾಜಪೇಟೆಯಲ್ಲಿ ಹಾಲು ಕೊಡುವ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಪ್ರಕರಣವನ್ನು ಖಂಡಿಸಿ, ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ 10.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ.