ಮಡಿಕೇರಿ NEWS DESK ಜ.17 : ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಿತಿಯ ಪ್ರಮುಖರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಗೋವುಗಳ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸಿದರು.