ಸೋಮವಾರಪೇಟೆ NEWS DESK ಜ.17 : ಇಂದು ಬೆಳಿಗ್ಗೆ ರಾಘವೇಂದ್ರ ಬಸ್ಸಿನಲ್ಲಿ ಶನಿವಾರಸಂತೆಯಿಂದ ಆಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬರು ಸೋಮವಾರಪೇಟೆ ಬಸ್ ನಿಲ್ದಾಣದಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಾಹ್ನ ವ್ಯಕ್ತಿಯನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಪೊಲೀಸರು ವ್ಯಕ್ತಿ ಮೃತಪಟ್ಟಿರುವುದನ್ನು ಖಾತ್ರಿ ಪಡಿಸಿಕೊಂಡರು. ಈ ಅಪರಿಚಿತ ವ್ಯಕ್ತಿಯ ಬಗ್ಗೆ ತಿಳಿದವರು ಸೋಮವಾರಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ವೃತ್ತನಿರೀಕ್ಷಕ ಮುದ್ದುಮಾದೇವ ಮನವಿ ಮಾಡಿದ್ದಾರೆ.