Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ : ಪ್ರತಿಯೊಬ್ಬರು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು : ಮಾಜಿ ಸಚಿವ ಎಂ.ಸಿ.ನಾಣಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ : ಪ್ರತಿಯೊಬ್ಬರು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು : ಮಾಜಿ ಸಚಿವ ಎಂ.ಸಿ.ನಾಣಯ್ಯ*

ಜನವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೂರ್ನಾಡು ಜ.18 NEWS DESK : ಮನೆಯಲ್ಲಿ ಅವರವರ ಮಾತೃಭಾಷೆಯಲ್ಲಿಯೆ ಮಾತನಾಡುವ ಮೂಲಕ ಪ್ರತಿಯೊಬ್ಬರು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು. ಆಗಮಾತ್ರ ಆ ಮಣ್ಣಿನ ಸಂಸ್ಕಾರ-ಸಂಸ್ಕೃತಿ ಪರಂಪರೆಗಳು ಮಕ್ಕಳಿಗೆ ತಿಳಿಯುತ್ತದೆ ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ “ಬೆಳ್ಳಿಹಬ್ಬ” ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲಭಾಷೆ ಕಲಿಯಬೇಕು. ಅದನ್ನು ಶಾಲೆಗಳಲ್ಲಿ ಕಲಿಯಲು ಅವಕಾಶವಿದೆ. ಮನೆಯಲ್ಲಿ ಮಾತೃಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಅಂದು ಇಲ್ಲಿ ಆಂಗ್ಲಮಾಧ್ಯಮ ಶಾಲೆ ಪ್ರಾರಂಭವಾಗಲು ಹಲವಾರು ಒತ್ತಡ, ಹೋರಾಟಗಳ ನಡವೆ ಪ್ರಾರಂಭ ಗೊಂಡಿರುವುದನ್ನು ನೆನಪಿಸಿಕೊಂಡ ಅವರು ಈಗ ಈ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ 25ವರ್ಷಗಳನ್ನು ಪೂರೈಸಿದೆ ಎಂದು ಹರ್ಷವ್ಯಕ್ತಪಡಿಸಿದರು. ಮುಂದೆ ಇಲ್ಲಿ ಪದವಿಪೂರ್ವ ಶಿಕ್ಷಣವನ್ನು ಪ್ರಾರಂಭಿಸುವ ಆಲೋಚನೆ ಇದ್ದಲ್ಲಿ, ಅದಕ್ಕೆ ಬೇಕಾದ ಆಡಳಿತಾತ್ಮಕ ಸಹಕಾರ ಮಾಡುವುದಾಗಿ ಹೇಳಿದರು. ವಿವೇಕನಂದರ ಸಮಾರಂಭಗಳನ್ನು ಶಾಲೆಗಳಲ್ಲಿಯೆ ಆಚರಿಸುವಂತಾಗಬೇಕು. ಆಗಮಾತ್ರ ವಿವೇಕನಂದರ ಆದರ್ಶ, ಧೃಡ ನಿಲುವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗುತ್ತದೆ. ಯಾವುದೆ ಶಾಲೆಯು ಕೇವಲ ಪಾಠಕ್ಕೆ ಪ್ರಾಧಾನ್ಯತೆ ನೀಡಿದರೆ ಸಾಲದು. ಅಲ್ಲಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕಗಳ ಬಗ್ಗೆಯು ಹೆಚ್ಚಿನ ಗಮನ ನೀಡಲು ಶಿಕ್ಷಕರು ಆಸಕ್ತಿತೋರಬೇಕು. ಎಲ್ಲಾ ಶಾಲೆಯಲ್ಲಿ ಒಂದು ಸುಸಜ್ಜಿತ ಆಟದ ಮೈದಾನ ಇರಲೇಬೇಕು. ಮಕ್ಕಳಲ್ಲಿ ಕ್ರೀಡಾ ಮನೋಭಾವನೆಯನ್ನು ಬೆಳೆಯವಂತಹ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು. ಖ್ಯಾತ ಸೈಕೊಥೆರಫಿಸ್ಟ್ ಅಬ್ರಾಹಂ ಪಿ. ರೂಬಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುವುದರ ಮೂಲಕ ಓದಿದ ಶಾಲೆಗೂ, ಪೋಷಕರಿಗೂ ಕೀರ್ತಿ ತಂದು ಕೊಡುವಂತಾಗಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಆಗಮಾತ್ರ ಜೀವನದಲ್ಲಿ ಮುಂದೆ ಬರಲುಸಾಧ್ಯ. ಮಕ್ಕಳು ದೇವರು, ಪೋಷಕರು, ಶಿಕ್ಷಕರುಗಳಿಗೆ ಮೊದಲು ಕೃತಜ್ಞತೆಯನ್ನು ತೋರಬೇಕು. ಒಂದು ಎರಡು ಮಕ್ಕಳ್ಳನ್ನು ಪೋಷಕರಿಗೆ ಮನೆಯಲ್ಲಿ ನೋಡಿಕೊಳ್ಳಲು ಈಗಿನ ಕಾಲದಲ್ಲಿ ಕಷ್ಟಕರವಾಗಿರುವಾಗ, ಶಾಲೆಯಲ್ಲಿ ಒಂದು ತರಗತಿಯಲ್ಲಿ ಸುಮಾರು 30 ರಿಂದ 40 ವಿದ್ಯಾರ್ಥಿಗಳನ್ನು ಎಂಟುಗಂಟೆಗಳ ಕಾಲ ನೋಡಿಕೊಳ್ಳುವುದು ಸಾಹಸದ ಕೆಲಸವಾಗಿದೆ. ಇಲ್ಲಿ ಪೋಷಕರು ಶಿಕ್ಷಕರೊಂದಿಗೆ ಅನ್ಯೋನ್ಯತೆಯಿಂದ ಇದ್ದು ಮಕ್ಕಳ ಉತ್ತಮ ಸ್ವಭಾವ ಬೆಳವಣಿಗೆಗೆ ಸಹಕಾರ ನೀಡುವಂತಾಗಬೇಕು ಎಂದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬದ ಪ್ರಯುಕ್ತ ಹೊರತರಲಾದ ‘ಜ್ವಲಿತಮ್’ ಸ್ಮರಣ ಸಂಚಿಕೆಯನ್ನು ಮಾಜಿ ಸಚಿವ ಎಂ.ಸಿ. ನಾಣಯ್ಯ ಬಿಡುಗಡೆಮಾಡಿದರು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಕರಕುಶಲ ವಸ್ತು ಪ್ರದರ್ಶನ ಮತ್ತು ಛಾಯಾಚಿತ್ರ ಪ್ರದರ್ಶನಗಳನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿಚೀಯಣ್ಣ ಉದ್ಘಾಟಿಸಿದರು. ಶಾಲಾವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪಾರಿತೋಷಕ ಮತ್ತು ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನಗಳನ್ನು ಅತಿಥಿಗಳು ವಿತರಿಸಿದರು. ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯಲ್ಲಿ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಬೆಲ್ಲುಚಿಣ್ಣಪ್ಪ, ಕಾರ್ಯದರ್ಶಿ ಬಡುವಂಡ ಬೋಪಣ್ಣ, ಖಜಾಂಚಿ ಎನ್.ಒ.ಮ್ಯಾಥ್ಯು, ನಿರ್ದೇಶಕರಾದ ಮಾಳೇಟಿರ ನವೀನ್ ಕಾರ್ಯಪ್ಪ, ಡಾ.ಜೆ.ಎ. ಕುಂಞಅಬ್ದುಲ್ಲಾ, ಬಡುವಂಡ ವಿಜಯ, ಅವರೆಮಾದಂಡ ಸುಗುಣ ಸುಬ್ಬಯ್ಯ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಶೀಲಾಅಬ್ದುಲ್ಲಾ, ಶಾಲಾ ಮುಖ್ಯೋಪಾಧ್ಯಾಯಿನಿ ಶಿಲ್ಪಪೊನ್ನಮ್ಮ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ತಾಯಿಬ್ ಹಾಜರಿದ್ದರು.
ಶಾಲಾ ವಿದ್ಯಾರ್ಥಿನಿ ಸುದೀಕ್ಷಾ ಪ್ರಾರ್ಥಿಸಿದರು, ಎ.ಬಿ. ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕಿ ಶಿಲ್ಪ ಪೊನ್ನಮ್ಮ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಜೀವಿತಾ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ನಡೆದ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು.

ವರದಿ :ಟಿ.ಸಿ. ನಾಗರಾಜ್, ಮೂರ್ನಾಡು.   

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.