ನಾಪೋಕ್ಲು ಜ.18 NEWS DESK : ಈ ದೇಶಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಗುರುಗಳಿಗೆ ನಾವುಗಳು ಸದಾ ಚಿರಋಣಿ ಆಗಿರಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಕರು ಇಡುವ ಪ್ರತಿಯೊಂದು ಹೆಜ್ಜೆಯನ್ನು ವಿದ್ಯಾರ್ಥಿಗಳು ಗಮನಿಸಿ ಪಾಲಿಸುತ್ತಾರೆ. ಹಾಗಾಗಿ ದೇಶದ ಉತ್ತಮ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಕಾಲೇಜಿನ ಅಧ್ಯಕ್ಷರಾದ ಪೊಡನೊಳಂಡ.ಎಸ್.ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೇರಂಬಾಣೆ ಗ್ರಾ.ಪಂ ಅಧ್ಯಕ್ಷ ಪಟ್ಟಮಾಡ ಮಿಲನ್, ಕಾಲೇಜು ಪ್ರಾಂಶುಪಾಲ ದಾಯನ ಎಸ್.ರಾಮಕೃಷ್ಣ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ್ ಗಪ್ಪು ಗಣಪತಿ, ಕಾಲೇಜಿನ ಮುಖ್ಯ ಶಿಕ್ಷಕ ಸಿ.ಆರ್.ಲೋಕೇಶ್, ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.
ವರದಿ : ದುಗ್ಗಳ ಸದಾನಂದ