


ಮೈಸೂರು NEWS DESK ಜ.19 : ಮೈಸೂರು ಕುವೆಂಪುನಗರದ ಬಿ.ಜಿ.ಎಸ್. ವಿದ್ಯಾಪೀಠದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠಾಪನೆ ಮತ್ತು ಶ್ರೀ ಯುಗಯೋಗಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ 80ನೇ ವರ್ಷದ ಜಯಂತ್ಯುತ್ಸವ* ಸಮಾರಂಭ ನಡೆಯಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳು, ಗಣ್ಯರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.












