ಮಡಿಕೇರಿ ಜ.20 NEWS DESK : ಪೊನ್ನಂಪೇಟೆ ತಾಲ್ಲೂಕು ದೇವರಪುರ ಗ್ರಾ.ಪಂ ಅಂಬುಕೊಟ್ಟೆ ವ್ಯಾಪ್ತಿಯಯಲ್ಲಿ ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾನಿಗೀಡಾದ ಅಮುದ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ನಂತರ ಮನೆಯವರೊಂದಿಗೆ ಘಟನೆಯ ವಿವರ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಮಾನ್ಯ ಶಾಸಕರು ತಮ್ಮ ವೈಯುಕ್ತಿಕ ಸಹಾಯ ಹಸ್ತ ನೀಡಿದರು.ಸಂದರ್ಭ ಶಾಸಕರು ಕುಟುಂಬಸ್ಥರಿಗೆ ವೈಯಕ್ತಿಕ ನೆರವು ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.