ಕುಶಾಲನಗರ ಜ.20 NEWS DESK : ಮೈಸೂರು ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಬಿ.ಎಡಿ(B.Ed) ಕೋರ್ಸ್ ಫಲಿತಾಂಶವನ್ನು ಪ್ರಕಟಿಸಿದ್ದು, ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಬಿ.ಎಡಿ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಎಂ.ಸೋನಿಯಾ ಶೇ. 96.54 ಅಂಕಗಳಿಸುವ ಮೂಲಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಸೋನಿಯಾ ಹೆಬ್ಬಾಲೆ ಗ್ರಾಮದ ಕನಕ ಬ್ಲಾಕ್ ನಿವಾಸಿ ಪೊಲೀಸ್ ಅಧಿಕಾರಿಯಾಗಿದ್ದ ದಿವಂಗತ ಹೆಚ್.ಜೆ.ಮಹೇಶ್ ಮತ್ತು ಮಣಿ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.