ಸೋಮವಾರಪೇಟೆ ಜ.21 NEWS DESK : ಗ್ರಾಮ ಸಹಾಯಕರ ಸಂಘದಿಂದ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಯಿತು. ಗ್ರಾಮ ಸಹಾಯಕರುಗಳಿಗೆ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಬೇಕೆಂದು ಮನವಿ ಸಲ್ಲಿಸಿದರು. ಸಂಘದ ಬೇಡಿಕೆಗಳನ್ನು ಆದ್ಯತೆಯ ಮೇರೆ ಈಡೇರಿಸುವ ಭರವಸೆಯನ್ನು ಶಾಸಕರು ನೀಡಿದರು. ಇದೇ ಸಂದರ್ಭ ಶಾಸಕರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮ ಸಹಾಯಕರ ಸಂಘದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಸುರೇಶ್, ಪದಾಧಿಕಾರಿಗಳಾದ ಶಶಿಕುಮಾರ್, ಲೀನಾ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.