ಚಿತ್ರದುರ್ಗ ಜ.21 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸ ಜಲಾಶಯ ಅಣೆಕಟ್ಟೆ ನಿರ್ಮಾಣಗೊಂಡ ನಂತರ ಮೂರನೇ ಬಾರಿಗೆ ಜಲಾಶಯ ಭರ್ತಿಯಾಗಿ ಕೋಡಿ ಹರಿದಿರುವ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ವಾಣಿವಿಲಾಸ ಜಲಾಶಯಕ್ಕೆ ಭೇಟಿ ನೀಡಿˌವೇದಾವತಿ ನದಿಗೆ ಬಾಗಿನ ಅರ್ಪಿಸಿದರು. ಇದೆ ವೇಳೆ ಜಲಾಶಯದ ಬಳಿ ಇರುವ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿˌ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್, ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ರಾಜಮಾತೆ ಕೆಂಪನಂಜಮ್ಮಣ್ಣಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು.