ಮಡಿಕೇರಿ ಜ.21 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರಕಾರದ ವಿಶೇಷ ಅತಿಥಿಯಾಗಿ ಆಯ್ಕೆಯಾಗಿರುವ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಅವರನ್ನು ಮಡಿಕೇರಿ ತಾಲ್ಲೂಕು ಪಂಚಾಯತ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಕಾಂತೂರ್-ಮೂರ್ನಾಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಎಂ.ಚಂದ್ರಮೌಳಿ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖರ್ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಹೊದ್ದೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಮಡಿಕೇರಿ ತಾ.ಪಂ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಹೊದ್ದೂರು ಗ್ರಾ.ಪಂ ಸದಸ್ಯರು ಹಾಗೂ ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.