ಮಡಿಕೇರಿ ಜ.22 NEWS DESK : ಕೊಡಗು ಜಿಲ್ಲೆಯ ಹಾಡಿ, ಆಶ್ರಮ ಶಾಲೆ, ಅಂಗನವಾಡಿ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮತ್ತು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಮಧುಸೂಧನ್ ಅವರ ನಿರ್ದೇಶನದ ಮೇರೆಗೆ ಕೊಡಗು ಜಿಲ್ಲೆಯ ಹಾಡಿ, ಆಶ್ರಮ ಶಾಲೆ, ಅಂಗನವಾಡಿ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಯುನಿಸೆಫ್ ನ ಮನೋಜ್ ಸೆಬಸ್ಟಿನ್ ಮತ್ತು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಶಿಶು ಮರಣದ ಕಾರಣಗಳು, ಆರೋಗ್ಯ ಸಮಸ್ಯೆಗಳ ಬಗ್ಗೆ ಹಾಗೂ ಸಂವಹನ ಯೋಜನೆಗಾಗಿ ಕಾರ್ಯತಂತ್ರಗಳನ್ನು ರೂಪಿಸಿವ ಕುರಿತು ಸ್ಥಳೀಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಸಮುದಾಯದೊಂದಿಗೆ ಚರ್ಚಿಸಿದರು. ಈ ಸಂದರ್ಭ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಶಿವಯ್ಯ ಹಾಜರಿದ್ದರು.