ಆಲೂರು ಜ.22 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕೃಷಿಕರೊಬ್ಬರು ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಡಿಬೈಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಗ್ರಾಮದ ರೈತ ಪುಟ್ಟಯ್ಯ(75) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ದಿನಸಿ ಸಾಮಾಗ್ರಿಗಳನ್ನು ಖರೀದಿಸಿ ಮನೆಗೆ ಬರುತ್ತಿದ್ದಾಗ ಕಾಡಾನೆ ಎದುರಾಗಿದೆ. ಗಾಬರಿಗೊಂಡ ಪುಟ್ಟಯ್ಯ ಅವರು ಆನೆಯಿಂದ ತಪ್ಪಿಸಿಕೊಳ್ಳಲು ಕಾಫಿ ತೋಟದೊಳಗೆ ಓಡಿ ಹೋಗಿದ್ದಾರೆ. ಆದರೂ ಬಿಡದ ಆನೆ ದಾಳಿ ಮಾಡಿದ್ದು, ಪುಟ್ಟಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಕಾಡಾನೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದರು.