ಮಡಿಕೇರಿ ಜ.22 NEWS DESK : ದಕ್ಷಿಣ ಕೊಡಗು ವ್ಯಾಪ್ತಿಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಪೊನ್ನಂಪೇಟೆ ಸಮೀಪ ಕೋಣನಕಟ್ಟೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ನಸುಕಿನ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದೆ. ಮನೆಯ ಸುತ್ತಲೂ ಓಡಾಡಿರುವ ಕಾಡಾನೆ ಹೂಕುಂಡಗಳನ್ನು ಹಾನಿಗೊಳಿಸಿದೆ. ಕಾಡಾನೆ ಬಂದು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮಸ್ಥರು ಕಾಡಾನೆ ಹಾವಳಿ ಕುರಿತು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.