ನಾಪೋಕ್ಲು ಜ.22 NEWS DESK : ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಎ.ಎಂ.ಡಿಯಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಕರ್ನಾಟಕ ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಕೊಡಗಿನ ಜವಾಹರ್ ನವೋದಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಎ.ಎಂ.ಡಿಯಾ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾಳೆ. ಇವಳು ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೊಳಂಡ ಮಿಥುನ್ ಮಾಚಯ್ಯ ಮತ್ತು ನೀನಾ ಮಾಚಯ್ಯ ದಂಪತಿಗಳ ಪುತ್ರಿ.
ವರದಿ : ದುಗ್ಗಳ ಸದಾನಂದ.