ವಿರಾಜಪೇಟೆ ಜ.22 NEWS DESK : ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳಾದ ಕುಜ್ಞ0ಡ ಮಹೇಶ್ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಮಾತನಾಡಿದ ಮಹೇಶ್, ಗ್ರಾಮೀಣ ಶಾಲೆಯ ಮಕ್ಕಳು ಕೂಡ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಧ್ಯಯನ ಮಾಡುವಂತಾಗಬೇಕು. ಕಂಪ್ಯೂಟರ್ ಕಲಿಕೆ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತವಾಗಬೇಕೆಂದು ಹೇಳಿದರು. ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದಲೇ ಕಂಪ್ಯೂಟರ್ ಶಿಕ್ಷಣ ಪಡೆಯುವಂತಾಗಬೇಕೆಂದು ಅಭಿಪ್ರಾಯಪಟ್ಟರು. ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಲೆಗೆ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ಸಹಕಾರವನ್ನು ನೀಡಲಾಗುವುದು ಎಂದರು. ನಮ್ಮ ಗ್ರಾಮದ ಶಾಲೆ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸದಾ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ಹೇಳಿದರು. ಕಲ್ತೊಡು ಕ್ಲಸ್ಟರ್ ನ ಸಿ.ಆರ್.ಪಿ.ವೆಂಕಟೇಶ್, ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶಿಲ್ಪಾ, ರಾಝಿಕ್, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಸ್ವಾಗತಿಸಿದರು.