ವಿರಾಜಪೇಟೆ ಜ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ)ವಿರಾಜಪೇಟೆ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಮಣ್ಣು ಪರೀಕ್ಷೆ ಮತ್ತು ಸಸ್ಯ, ಪೋಷಕಾಂಶಗಳನ್ನು ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾನೂರು ವಲಯದ ಬಾಳೆಲೆ ಕಾರ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಅರಣ್ಯ ಮಹಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಲಕ್ಷ್ಮಿ ಮಾತನಾಡಿ, ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶಗಳ ನಿರ್ವಹಣೆ ಮಣ್ಣಿನಲ್ಲಿ ಹೆಚ್ಚು ಅಂಶ ಇರುತ್ತದೆ. ಮಣ್ಣು ಪರೀಕ್ಷೆ ಹೇಗೆ ಮಾಡಬೇಕು, ನೀರಾವರಿ, ಭೂಮಿ ಅಳತೆಗೆ ಆಳಕ್ಕೆ ಗುಂಡಿ ತೆಗೆದು ಗಿ ಆಕಾರದಲ್ಲಿ ಅಳತೆ ತೆಗೆದುಕೊಳ್ಳಬೇಕು, ಮಣ್ಣಿನ ಹೆಲ್ತ್ ಕಾರ್ಡ್ ರೈತ ಸಂಪರ್ಕ ಹೋಗಿ ಮಣ್ಣು ಪರೀಕ್ಷೆ ಮಾಡುತ್ತಾರೆ ಕೃಷಿ ವಿಶ್ವವಿದ್ಯಾಲಯ, ಅರಣ್ಯ ಮಹಾ ವಿಶ್ವವಿದ್ಯಾಲಯದಲ್ಲಿ ಮಣ್ಣು ಪರೀಕ್ಷೆ ಮಾಡುತ್ತಾರೆ ಎಂಬ ವಿಚಾರಗಳನ್ನು ತಿಳಿಸಿ ಮಣ್ಣು ಪರೀಕ್ಷೆಯ ಪ್ರಾತ್ಯಕ್ಷತೆ ಮೂಲಕ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕ ವಸಂತ್, ಒಕ್ಕೂಟದ ಅಧ್ಯಕ್ಷರಾದ ಪದ್ಮಾವತಿ, ಸೇವಾ ಪ್ರತಿನಿಧಿ ಸರೋಜಾ, ಶೀಲಾ ಸೇವದಾರರಾದ ಮೇಘ, ಸಂಘದ ಸದಸ್ಯರು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.