ನಾಪೋಕ್ಲು ಜ.23 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯಾದ ಆವರಣದಲ್ಲಿದ್ದ ಕಸ, ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಸೇವಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣ ಘಟಕದ ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ ಹಾಗೂ ಪ್ರಮುಖರಾದ ಶರವಣ, ರವಿ, ಚಂದ್ರಕಲಾ, ರಮ್ಯಾ, ಪೊನ್ನಮ್ಮ ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.