Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
ಇತ್ತೀಚಿನ ಸುದ್ದಿಗಳು

*ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*

January 23, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜ.23 NEWS DESK : ದೇಶದಲ್ಲಿ ವಿಶೇಷ ಆಚಾರ, ವಿಚಾರ, ಪದ್ಧತಿ ಪರಂಪರೆಗಳನ್ನು ಹೊಂದಿರುವ ಹೆಮ್ಮೆಯ ಜಿಲ್ಲೆ ನಮ್ಮದು ಎಂದು ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜೆ.ದಿವಾಕರ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೋರಂಗಾಲ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ದಿ. ಡಾ.ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ ದತ್ತಿ ಉಪನ್ಯಾಸ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾದರು. ಎಲ್ಲರನ್ನೂ ಸರಿ ಸಮಾನರಾಗಿ ಕಾಣುವ ಸಮಾಜ ನಮ್ಮ ಜಿಲ್ಲೆಯಲ್ಲಿದೆ. ಕೊಡಗಿನ ನೆಲ ಜಲವನ್ನು ಕವಿ ಪಂಜೆ ಮಂಗೇಶರಾಯರು ದೇವ ಸನ್ನಿಧಿ ಎಂದು ಬಣ್ಣಿಸಿದ್ದಾರೆ. ಶುದ್ಧ ಗಾಳಿ, ಸ್ವಚ್ಛ ನೆಲ, ನಮ್ಮ ಜಿಲ್ಲೆಯಲ್ಲಿದೆ ಎಂದು ಸಮೀಕ್ಷೆ ಹೇಳಿದೆ. ಹುಟ್ಟಿನಿಂದ ಸಾವಿನವರೆಗೆ ನಮ್ಮಲ್ಲಿ ವಿಶಿಷ್ಟ ಪದ್ದತಿಗಳು ಇದ್ದರೂ ಸಾವು ನೋವಿನಲ್ಲೂ ಸಹಾಯದ ಪದ್ಧತಿ ಇಂದಿಗೂ ನಡೆದು ಬಂದಿರುವುದು ನಮ್ಮ ಸಂಸ್ಕೃತಿಯಲ್ಲಿ ಮಾತ್ರ ಎಂದ ಅವರು, ಕೊಡಗಿನ ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕೃತಿಕ ವಿಷಯದ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ವ್ಯವಸ್ಥಾಪಕ ಚೀಯಕಪೂವಂಡ ಮಿಥುನ್ ಚಂಗಪ್ಪ, ಆಂಗ್ಲಭಾಷೆ ವ್ಯಾವಹಾರಿಕ ಭಾಷೆಯಾಗಬೇಕು. ಅನ್ನದ ಭಾಷೆ ಮಣ್ಣಿನ ಭಾಷೆ ಕನ್ನಡಕ್ಕೆ ನಾವು ಆದ್ಯತೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕೊಡಗು ಜಿಲ್ಲಾ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕ ಮಾತನಾಡಿ, ದತ್ತಿ ಸ್ಥಾಪನೆ ಮಾಡಿದ ಡಾಕ್ಟರ್ ದುರ್ಗಾ ಪ್ರಸಾದ್ ಅವರು ತಮ್ಮ ತಂದೆ ತಾಯಿಯರ ನೆನಪಿನಲ್ಲಿ ದತ್ತಿ ಸ್ಥಾಪನೆ ಮಾಡಿದ್ದು ಅವರ ಸೇವೆಯ ಸ್ಮರಣಾರ್ಥ. ಪ್ರತಿ ವರ್ಷ ದತ್ತಿ ಉಪನ್ಯಾಸ ಹಾಗೂ ಕನ್ನಡ ಮಾಧ್ಯಮದ 10ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ ಮಾಡಲಾಗುತ್ತಿದೆ ಎಂದರು. ಶಾಲಾ ಮುಖ್ಯ ಶಿಕ್ಷಕಿ ಶ್ವೇತನ್ ಚಂಗಪ್ಪ ಮಾತನಾಡಿ, ನಮ್ಮ ಹಿಂದಿನ ತಲೆಮಾರಿನ ಬದುಕಿನ ಶೈಲಿ ಹಾಗೂ ಈಗಿನ ಆಡಂಬರದ ಬದುಕಿನ ಶೈಲಿಗೆ ಹೋಲಿಸಿದಾಗ ಬಹಳಷ್ಟು ವ್ಯತ್ಯಾಸಗಳು ಕಂಡುಬರುತ್ತವೆ ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕೃತಿ, ಆಚಾರ, ವಿಚಾರ, ಸಂಪ್ರದಾಯದ ಅಸ್ಮಿತೆಯನ್ನು ಇಂದಿನ ಮಕ್ಕಳು ಮುಂದುವರಿಸಿಕೊಂಡು ಹೋಗಬೇಕು. ಆದ್ದರಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭ ಹತ್ತನೇ ತರಗತಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಯು.ಅದವಿಯ ಇವರ ಅನುಪಸ್ಥಿತಿಯಲ್ಲಿ ಅವರ ಪೆÇೀಷಕರಾದ ಶಿಕ್ಷಕಿ ಅಮೀನ ಮತ್ತು ಉಮರ್ ಅವರನ್ನು ಸನ್ಮಾನಿಸಿ ದತ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುನಿಲ್ ಪತ್ರಾವೋ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಮುನಿರ್ ಅಹ್ಮದ್, ಗೌರವ ಕೋಶಾಧಿಕಾರಿ ಸಂಪತ್ ಕುಮಾರ್ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ನಾಡಗೀತೆ, ಡಿ.ಬಿ. ಮೌಲ್ಯ, ಎಂ.ಆರ್.ದೀಕ್ಷಿತಾ, ಕೆ.ವಿ.ಪ್ರಣಿತ ಸ್ವರಚಿತ ಕವನ ವಾಚನ, ಶಿಕ್ಷಕ ವೃಂದದಿಂದ ಗೀತ ಗಾಯನ ಸೊಗಸಾಗಿ ಮೂಡಿ ವಿದ್ಯಾರ್ಥಿ ಹೇಮಂತ್ ಎನ್‍ಎಸ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಎ.ಕೆ.ಇಂದಿರ ಸ್ವಾಗತಿಸಿ, ಭಾಗಮಂಡಲ ಹೋಬಳಿ ನಿಕಟಪೂರ್ವ ಅಧ್ಯಕ್ಷರಾದ ಶ್ರೀಧರ್ ಎ ಎಸ್ ವಂದಿಸಿದರು.
ವರದಿ : ದುಗ್ಗಳ ಸದಾನಂದ 

Share. Facebook Twitter Pinterest LinkedIn Tumblr Email WhatsApp
Previous Article*ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*
Next Article *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.