ಮಡಿಕೇರಿ ಜ.23 NEWS DESK : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಉತ್ಸವ ಸಮಿತಿ ವತಿಯಿಂದ ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ದಶಮಿ ಬಿಡುಗಡೆ ಮತ್ತು ಸನ್ಮಾನ ಸಮಾರಂಭ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ರಾಜಾಸೀಟು ಸಮೀಪದ ರಾಜದರ್ಶನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಉದ್ಘಾಟಿಸಲಿದ್ದು, ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯದ ಸಂಚಾಲಕ ಮೌಲಾನ ಯು.ಅಬ್ದುಸಲಾಮ್, ಮಡಿಕೇರಿ ಸಂತ ಮೈಕಲರ ದೇವಾಲಯದ ಧರ್ಮಾಧಿಕಾರಿ ರೆ.ಫಾ.ಜಾಜ್ ದೀಪಕ್ ಎ. ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನ ನೀಡಲಿದ್ದಾರೆ. ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಹಿರಿಯ ಟ್ರಸ್ಟಿ ಹಾಗೂ ಮಾಜಿ ಸಚಿವ ಎಂ.ಸಿ.ನಾಣಯ್ಯ ಪುಸ್ತಕ ಬಿಡುಗಡೆ ಮಾಡಲಿದ್ದು, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ ರವಿ ಕರ್ಕೆರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಟ್ರಸ್ಟಿ ಹಾಗೂ ದಶಮಿ ಸ್ಮರಣ ಸಂಚಿಕೆ ಸಂಪಾದಕ ಟಿ.ಪಿ.ರಮೇಶ್, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ದಶಮಿ ಸ್ಮರಣ ಸಂಚಿಕೆ ಪೋಷಕ ಸಂಪಾದಕ ಡಾ.ಹೆಚ್.ವಿ.ದೇವದಾಸ್ ಪಾಲ್ಗೊಳ್ಳಲಿದ್ದಾರೆ.