ಮಡಿಕೇರಿ ಜ.24 NEWS DESK : ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮಸಭೆಯು ಜ.29 ರಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ ಅಧ್ಯಕ್ಷರಾದ ಕೆ.ಸಿಂಧು ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಪುಶುವೈಧ್ಯಾಧಿಕಾರಿ ಡಾ.ಸಂಜೀವ್ ಕುಮಾರ್ ಆರ್ ಸಿಂಧೆ ಪಾಲ್ಗೊಳ್ಳಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷ ಮತ್ತು ಸದಸ್ಯರು ಮನವಿ ಮಾಡಿದ್ದಾರೆ.