ಮಡಿಕೇರಿ ಜ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ catract ಶಸ್ತ್ರ ಚಿಕಿತ್ಸೆ ಪ್ರಯುಕ್ತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಮಡಿಕೇರಿ ವೈದ್ಯಕೀಯ ಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ನಿರ್ದೇಶಕ ಡಾ.ಎ.ಜೆ.ಲೋಕೇಶ್ ಉದ್ಘಾಟಿಸಿ, ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದಂತೆ ಕಣ್ಣಿನ ಆರೋಗ್ಯದ ಕುರಿತು ಹಾಗೂ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾ.ನಂಜುಂಡಯ್ಯ ಮಾತನಾಡಿ, ಪ್ರತಿ ಗ್ರಾಮ ಮಟ್ಟದಲ್ಲಿ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರಲ್ಲಿ ವಿಶೇಷ ಚೇತನಿಗೆ ಸಂಬಂಧಿಸಿದಂತೆ ಕಾರ್ಡ್ ನ್ನು ನೀಡುವ ಮೂಲಕ ಪ್ರತಿಯೊಬ್ಬರಿಗೂ ಇಲಾಖೆಯ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಶಿಬಿರವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಣ್ಣಿನ ವಿಭಾಗದ ಮುಖ್ಯಸ್ಥರಾದ ಕೃಪಾಲಿನಿ ಅಪ್ಪಯ್ಯ ಮಾತನಾಡಿ, ಕಣ್ಣಿನ ಸಮಸ್ಯೆಗೆ ವಯಸ್ಸಿನ ಮಿತಿ ಇರುವುದಿಲ್ಲ, ಪ್ರತಿಯೊಬ್ಬರೂ ತಮ್ಮ ಕಣ್ಣಿಗೆ ಸಂಬಂಧಿಸಿದಂತೆ ಯಾವುದೇ ಸಣ್ಣ ಸಮಸ್ಯೆ ಇದ್ದರೂ ಕೂಡ ಪರೀಕ್ಷೆಗೆ ಒಳಪಡಿಸಿ ಸರಿಯಾದ ಚಿಕಿತ್ಸೆ ಪಡೆದಲ್ಲಿ ಕಣ್ಣು ಉತ್ತಮವಾಗಿ ಕೆಲಸ ನಿರ್ವಹಿಸಬಹುದು ಹಾಗೂ ಇಲಾಖೆಯಿಂದ ಉಚಿತ ಕನ್ನಡಕ ಹಾಗೂ ಶಸ್ತ್ರ ಚಿಕಿತ್ಸೆಯ ಕಾರ್ಯಕ್ರಮಗಳ ಇದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಣ್ಣಿನ ವೈದ್ಯಾಧಿಕಾರಿ ಡಾ.ವಿಕ್ರಂ ಹಾಗೂ ಕಿವಿ, ಮೂಗು ನ ವೈದ್ಯಾಧಿಕಾರಿ ರಾಘವೇಂದ್ರ, ಮನೋ ವೈದ್ಯರಾದ ಡಾ.ರಮೇಶ್, ವೈದ್ಯಕೀಯ ವಿದ್ಯಾರ್ಥಿಗಳು, ಹಿರಿಯ ನಾಗರಿಕರೂ, ಹಿರಿಯ ನಾಗರಿಕರ ಸಹಾಯವಾಣಿಯ ಮತ್ತು ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ವಿಮಲಾ ಸ್ವಾಗತಿಸಿದರು.