ಮಡಿಕೇರಿ NEWS DESK ಜ.24 : ತೋಟಗಾರಿಕೆ ಇಲಾಖೆಯು ಜಿಲ್ಲಾ, ಆಡಳಿತ, ಜಿಲಾ, ಪಂಚಾಯತ್ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜ.24 ರಿಂದ 27 ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಸುಮಾರು 7000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ ಗಳಲ್ಲಿ ಸುಮಾರು 20000 ವಿವಿಧ ಜಾತಿಯ ಹೂವುಗಳಾದ ಸಾಕ್ಷಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್, ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಮರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. 2. ಕರ್ನಾಟಕ ಸರ್ಕಾರದ, ತೋಟಗಾರಿಕೆ ಇಲಾಖೆಯಿಂದ ಕರ್ನಾಟಕ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನು ತುಪ್ಪವನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ “ಝೇಂಕಾರ (JHENKARA)” ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, “ಝೇಂಕಾರ (JHENKARA)” ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರಧ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ವಿಂಟೇಜ್ ಕಾರ್ ನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. Butterfly wings, ಪ್ರವೇಶದಾರ, ಪ್ರಾಣಿ ಮುಖದ ಕಲಾಕೃತಿಯನ್ನು ಹೂವುಗಳಿಂದ ನಿರ್ಮಾಣ ಮಾಡಲಾಗಿದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟು. ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಫ್ರೆಮ್, Selfy Zone ಮಾದರಿಯನ್ನು ನಿರ್ಮಿಸಲಾಗಿದೆ. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳು ಆಕರ್ಷಣೀಯವಾಗಿವೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8.00 ರಿಂದ 10.00 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.