ಮಡಿಕೇರಿ ಜ.24 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ನಾಲ್ಕು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ, “ಝೇಂಕಾರ (JHENKARA)” ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರಾಂಡ್ ಗಳ ವಿವಿಧ ಕಲಾಕೃತಿ, ಹೂ ಹಾಗೂ ಜೇನು ಹುಳುವಿನ ಕಲಾಕೃತಿ, ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರಧ್ವಜದ ಕಲಾಕೃತಿ, ವಿಂಟೇಜ್ ಕಾರ್ ನ ಕಲಾಕೃತಿ, Butterfly wings, ಪ್ರವೇಶದಾರ, ಪ್ರಾಣಿ ಮುಖದ ಕಲಾಕೃತಿ, ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟು, ಫೋಟೋ ಫ್ರೆಮ್, Selfy Zone, ತರಕಾರಿ, ಹಣ್ಣುಗಳಿಂದ ಕೆತ್ತಲಾದ ವಿವಿಧ ಕ್ಷೇತ್ರಗಳ ಗಣ್ಯರುಗಳ ಕಲಾಕೃತಿ ಗಮನ ಸೆಳೆಯುತ್ತಿದೆ.