ಬೆಂಗಳೂರು ಜ.24 NEWS DESK : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಹೊಸ ಕಾನೂನು ರಚನೆ ಮಾಡುತ್ತೇವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.