ಮಡಿಕೇರಿ ಜ.25 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜ.29 ರಂದು ಕುಶಾಲನಗರದಲ್ಲಿ ಉಚಿತ ಕ್ಯಾನನ್ ಕ್ಯಾಮರಾ ಕಾರ್ಯಾಗಾರ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಛಾಯಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ಅವರು ತಮ್ಮ ಅಧ್ಯಕ್ಷತೆಯಲ್ಲಿ ಕುಶಾಲನಗರದ ಸುಲೋಕ ಟವರ್‍ನಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ವಿಶೇಷ ಆಹ್ವಾನಿತರಾಗಿ ತಾಲ್ಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಕಿರಣ್ ಗೌರಯ್ಯ ಪಾಲ್ಗೊಳ್ಳಲಿದ್ದಾರೆ. ಗಣೇಶ ಫೋಟೋ ಫ್ಯಾಲೆಸ್ ಮತ್ತು ಗಣೇಶ ಕಲರ್ ಲ್ಯಾಬ್ ಮಾಲೀಕ ಶ್ರೀನಿಧಿ, ಕುಶಾಲನಗರ ದೇವಾಲಯಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್ ಶುಭ ನುಡಿಗಳನ್ನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಎಸ್.ಎಲ್.ಎನ್ ಕಾಫಿ ಸಂಸ್ಥೆಯ ಪ್ರಮುಖರು ಹಾಗೂ ಸಮಾಜ ಸೇವಕರಾದ ವಿಶ್ವನಾಥನ್, ಸಾಹಿತಿಗಳು ಮತ್ತು ಗ್ಲೋಬಲ್ ಅಚೀವರ್ಸ್ ಅವಾರ್ಡ್ ಪುರಸ್ಕೃತರಾದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಕ್ಯಾಮರಾ ಕಾರ್ಯಾಗಾರಕ್ಕೆ ನೋಂದಾಯಿಸಿಕೊಳ್ಳಲು ಜ.27 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ ಆವರ್ತಿ ಆರ್.ಮಹದೇವಪ್ಪ – 9845809045, ರೋಷನ್-9620825829, ಬಿ.ವೈ.ಲವಕುಮಾರ್ – 9008212020 ನ್ನು ಸಂಪರ್ಕಿಸಬಹುದಾಗಿದೆ ಎಂದು ಆವರ್ತಿ ಆರ್.ಮಹದೇವಪ್ಪ ತಿಳಿಸಿದ್ದಾರೆ.