ವಿರಾಜಪೇಟೆ NEWS DESK ಜ.26 : ವಿರಾಜಪೇಟೆ ತಾಲೂಕು ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಆಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಶಾಸಕರು ಭಾರತೀಯರ ಬದುಕಿಗೆ ಸಂವಿಧಾನ ನೀಡಿದ ಬಲವನ್ನು ನಾವು ಅರಿತುಕೊಳ್ಳಬೇಕು ಎಂದು ಹೇಳಿದರು. ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.