ಮಡಿಕೇರಿ NEWS DESK ಜ.26 : ಸಂವಿಧಾನದ ಆಶಯಕ್ಕೆ ಬದ್ಧವಾಗಿ ನಾವೆಲ್ಲರೂ ಕರ್ತವ್ಯ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕರೆ ನೀಡಿದರು. ನಗರದ ಜಿ.ಪಂ ಕಚೇರಿಯಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಷ್ಟ್ರ ನಾಯಕರ ಆಶಯಗಳನ್ನು ಮೈಗೂಡಿಸಿಕೊಂಡು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕೊಡಗು ವಿದ್ಯಾಲಯ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ತಂಡ ಮತ್ತು ವಿದ್ಯಾರ್ಥಿನಿಯರು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿದ್ದು ಈ ಬಾರಿಯ ವಿಶೇಷವಾಗಿತ್ತು. ಇದೇ ವೇಳೆ ಮಾನ್ಯ ಜಿ.ಪಂ.ಉಪಕಾರ್ಯದರ್ಶಿ ಜಿ.ಧನರಾಜು, ಮಾನ್ಯ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಮಾನ್ಯ ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಮಾನ್ಯ ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್ ಮತ್ತು ಜಿ.ಪಂ. ಸಿಬ್ಬಂದಿಗಳು ಇದ್ದರು.