ಮಡಿಕೇರಿ NEWS DESK ಜ.26 : ಕೊಡಗು ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ ಭಾನುವಾರ ಅರ್ಥಪೂರ್ಣವಾಗಿ ನಡೆಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬೆನಕ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ರ‍್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.