ಮಡಿಕೇರಿ NEWS DESK ಜ.26 : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ನಡೆಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಪ್ರಾಂಶುಪಾಲ ಫ್ರೋ ಮೇಜರ್ ರಾಘವ ಭಾರತ ಗಣರಾಜ್ಯವಾದ ಕುರಿತ ಇತಿಹಾಸವನ್ನು ನೆನಪಿಸಿಕೊಂಡರು ಹಾಗು ಕಾಲೇಜಿನ ಆರು ವಿದ್ಯಾರ್ಥಿಗಳು ಭಾರತೀಯ ಸೇನೆಗೆ ಆಯ್ಕೆಯಾದ ಕುರಿತು ಸಂತಸ ಹಂಚಿಕೊಂಡರು. ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ದೇಶಕ್ಕೆ ನೀಡಿದ ಸೇವೆಯನ್ನು ಸ್ಮರಿಸಿಕೊಂಡರು. ಮುಖ್ಯ ಅಥಿತಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ಡಾ ಬಿ ಆರ್ ಅಂಬೆಡ್ಕರ್ ನೇತೃತ್ವದಲ್ಲಿ ಭಾರತಕ್ಕೆ ಸಂವಿಧಾನ ರಚನೆಯಾಗಿ ಅದರ ಆಧಾರದಲ್ಲಿ ಭಾರತವು ಗಣರಾಜ್ಯವಾದುದು ಇತಿಹಾಸ, ಅಂದಿನಿಂದ ಇಂದಿನವರೆಗಿನ ಜನರು ನಿಶ್ಚಿಂತೆಯಿಂದ ಬದುಕಲು ಭಾರತದ ಸಂವಿಧಾನ ಅವಕಾಶ ಮಾಡಿಕೊಟ್ಟಿದ. ಇದಕ್ಕೆ ನಾವೆಲ್ಲರು ಗೌರವ ನೀಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಮವಸ್ತ್ರದಲ್ಲಿ ನೆರೆದಿದ್ದ ಎನ್ ಸಿ ಸಿ ಕೆಡೆಟ್ ಗಳನ್ನು ಗುರುತಿಸಿ, ತಮ್ಮ ಕಾಲೇಜಿನ ದಿನಗಳನ್ನು ನೆನಪಿಸಿಕೊಂಡರು. ಕಾಲೇಜಿನ ಹಳೆ ವಿದ್ಯಾರ್ಥಿ ಹಾಗು ದುಬೈನ ಕೊಡಗು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಫೀಕ್ ಅಲಿ ಮಾತನಾಡಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು ಹಾಗು ಕೊಡಗಿನಿಮದ ದುಬೈಗೆ ತೆರಳುವ ಕೊಡಗಿನ ವಿದ್ಯಾರ್ಥಿಗಳಿಗೆ ಸಂಪೂರ್ಣ ನೆರವನನು ನೀಡುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಫ್ರೋ ಕೃಷ್ಣ ,ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.