ಸುಂಟಿಕೊಪ್ಪ ಜ.27 NEWS DESK : ಸಮಾಜದ ಕಟ್ಟಕಡೆಯ ವ್ಯಕ್ತಿಕೂಡ ರಾಜ್ಯ ಅಥವಾ ರಾಷ್ಟ್ರಮಟ್ಟದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ಭಾರತದ ಸಂವಿಧಾನ ನೀಡಿರುವುದು ನಮ್ಮ ಸಂವಿಧಾನದ ಹೆಗ್ಗಳಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ನಮ್ಮ ದೇಶದ ಸಂವಿಧಾನ ಒಂದಾಗಿದ್ದು, ಇದನ್ನು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ್ದಾರೆಂದು ಸ್ಮರಿಸಿದರು. 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಬಂದಿದ್ದರೂ ಕೂಡ ನಮಗೆ ನಮ್ಮದೆಯಾದ ಮತ್ತು ಆಡಳಿತ ವ್ಯವಸ್ಥೆಗಳು ಇರಲಿಲ್ಲ. ಇದನ್ನು ಮನಗಂಡು ಮೊದಲ ರಾಷ್ಟ್ರಪತಿಗಳಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಂವಿಧಾನ ರಚನಾ ಸಮಿತಿಯನ್ನು ಮಾಡಿ ಕರಡು ಸಮಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು ಎಂದು ಸಾಯಿಕುಮಾರ್ ಸ್ಮರಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿಯು 2 ವರ್ಷಕ್ಕೂ ಹೆಚ್ಚು ಕಾಲ ಸಂವಿಧಾನ ರಚನೆಯ ಬಗ್ಗೆ ಆಧ್ಯಾಯನ ನಡೆಸಿ ಸಂವಿಧಾನವನ್ನು 1949ರಲ್ಲಿ ಪೂರ್ಣಗೊಳಿಸಲಾಯಿತು ಈ ಸಂವಿಧಾನವನ್ನು 1950 ರ ಜನವರಿ 26 ರಂದು ಅಧಿಕೃತವಾಗಿ ಜಾರಿಗೆ ತರಲಾಯಿತು. ಸಂವಿಧಾನದ ಅಡಿಯಲ್ಲಿ ನಮ್ಮದೆಯಾದ ಆಡಳಿತ ವ್ಯವಸ್ಥೆ ಮತ್ತು ಪಂಚವಾರ್ಷಿಕ ಯೋಜನೆಗಳಿಂದ ದೇಶ ಅಭಿವೃದ್ಧಿಯ ಕಡೆಗೆ ಹೊರಳಿತು ಇಂದು ದೇಶ ವಿದೇಶಗಳಲ್ಲಿ ಭಾರತೀಯರು ಆಡಳಿತ ಹಿಡಿಯುವ ಮಟ್ಟಿಗೆ ಪ್ರಗತಿ ಸಾಧಿಸಿದ್ದಾರೆಂದು ಟಿ.ಕೆ.ಸಾಯಿಕುಮಾರ್ ವಿಶ್ಲೇಷಿದರು. ಸುಂಟಿಕೊಪ್ಪ ವಿವಿಧ ಜನಾಂಗಗಳು ಆನೇಕತೆಯಲ್ಲಿ ಏಕಾತೆ ಮತ್ತು ಸರ್ವಜನಾಂಗದ ಶಾಂತಿಯ ತೋಟವಾಗಿ ಬಾಳುತ್ತಿದ್ದಾರೆ ಇದು ಸಂವಿಧಾನಕ್ಕೆ ಅತ್ಯುತ್ತಮ ಉದಾಹರಣೆಯಾಗಿರುವ ಪ್ರದೇಶವು ಹೌದೆಂದು ಸಾಯಿಕುಮಾರ್ ಬಣ್ಣಿಸಿದರು. ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರಧ್ವಜಕ್ಕೆ ಗೌರವ ರಕ್ಷೆ ಸಮರ್ಪಿಸಿದರು. ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಧ್ವಜಾರೋಹಣ ನೇರವೇರಿಸಿದರು. ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಅಧ್ಯಕ್ಷೆಯನ್ನು ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿ ಶುಭಹಾರೈಸಿದರು. ಪುಟಾಣಿ ವಿದ್ಯಾರ್ಥಿಗಳ ಭಾರತಾಂಬೆಗೆ ನಮನ ಸಲ್ಲಿಸುವ ಅಂಗಸಾಧನೆಯ ನೃತ್ಯ ಜನಮನ ರಂಜಿಸಿತು, ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ವಿವಿಧ ಶಾಲೆಗಲ ಮಕ್ಕಳು ನೇರೆದಿದ್ದವರನ್ನು ಮನರಂಜಿಸಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು,ಪೌರಕಾರ್ಮಿಕರು ಹಾಗೂ ಪಂಚಾಯಿತಿ ಸಿಬ್ಬಂದಿಗಳನ್ನು ಮತ್ತು ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷ ಶಿವಮ್ಮ ಮಹೇಶ್,ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ರಫೀಕ್‍ಖಾನ್, ಮಂಜುನಾಥ್, ವಸಂತಿ, ಶಾಂತಿ, ನಾಗರತ್ನ, ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಕಾರ್ಯದರ್ಶಿ ರಹೆನಾ ಫೈರೋಜ್, ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾದ್ಯಾಯ ಸೇಲ್ವರಾಜ್, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಗೀತಾ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸ್ತ್ರೀಶಕ್ತಿ ಸಂಘದ ಸದಸ್ಯರು ಮತ್ತಿತರರು ಇದ್ದರು.