ಮಡಿಕೇರಿ ಜ.27 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕು ಮೇಕೇರಿಯ ಯುವಕರು ಆಯೋಜಿಸಿದ ಎಂ.ಕೆ.ಎಲ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಫೈನಲ್ ಪಂದ್ಯಾವಳಿಗೆ ಬ್ಯಾಟ್ ಬೀಸುವ ಮೂಲಕ ಕ್ರೀಡಾಪಟುಗಳಿಗೆ ಹುರಿದುಂಬಿಸಿದರು. ನಂತರ ಮಾತನಾಡಿದ ಶಾಸಕರು, ಕ್ರೀಡೆ ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸಲು ಸಹಕಾರಿಯಾಗಿದೆ ಮತ್ತು ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಪಂದ್ಯಾವಳಿಗಳು ವೇದಿಕೆಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಕ್ರೀಡಾ ಆಯೋಜಕರು, ಕ್ರೀಡಾಪಟುಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, PDO, ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.