ಕುಶಾಲನಗರ ಜ.27 NEWS DESK : ಶಾಲಾ- ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಆದರ್ಶ ವ್ಯಕ್ತಿತ್ವ ಹಾಗೂ ರಾಷ್ಟಪ್ರೇಮ ಬೆಳೆಸಿಕೊಳ್ಳಲು ದೇಶದ ಐಕ್ಯತೆ, ಸಮಗ್ರತೆಗೆ ಪಣ ತೊಡಬೇಕು ಎಂದು 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ಪಾಲ್ಗೊಂಡಿದ್ದ ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆಯ ಅಧ್ಯಕ್ಷ ಹಾಗೂ ಜೇಸಿ ತಂಬಂಡ ತೇಜ ದಿನೇಶ್ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ಎನ್.ಎಸ್.ಎಸ್.ಘಟಕದ ವತಿಯಿಂದ ಭಾನುವಾರ ( ಜ.26 ರಂದು ) ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಸಂಭ್ರಮ, ಸಾಗರದಿಂದ ಏರ್ಪಡಿಸಿದ್ದ 76 ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿ, ಸ್ವಾಭಿಮಾನಿ, ಗೌರವಯುತ ಜೀವನವನ್ನು ನಡೆಸಬೇಕು ಎಂದು ನಮ್ಮ ದೇಶದ ಅನೇಕ ಮಹನೀಯರು ಕಂಡಿದ್ದ ಕನಸನ್ನು ನನಸು ಮಾಡಲು ನಮ್ಮ ದೇಶದ ಸಂವಿಧಾನ ಸಹಕಾರಿಯಾಗಿದೆ ಎಂದರು. 2004 ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಗಾಡ್ ಆಫ್ ಆನರ್ ( ಪಥ ಸಂಚಲನದಲ್ಲಿ ಅತಿಥಿಗಳಿಗೆ ಗೌರವ ಸಲ್ಲಿಸುವ ಪ್ರಕ್ರಿಯೆ) ನಲ್ಲಿ ಕರ್ನಾಟಕ – ಗೋವಾ ಎನ್.ಸಿ.ಸಿ.ವತಿಯಿಂದ ಎನ್.ಸಿ.ಸಿ.ಕೆಡೆಟ್ ಆಗಿ ತಾವು ಪಾಲ್ಗೊಂಡಿದ್ದ ಅನುಭವದ ಬಗ್ಗೆ ತೇಜ ದಿನೇಶ್ ಅವರು, ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದುವ ಮೂಲಕ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದೊಂದಿಗೆ ಜೀವನದಲ್ಲಿ ಉತ್ತಮ ಸಾಧನೆ ಹೊಂದಬೇಕು ಎಂದು ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನವು ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ. ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ದಿನವು ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ ಎಂದು ಬಣ್ಣಿಸಿದರು. ಧ್ವಜಾರೋಹಣ ನೆರವೇರಿಸಿದ ಶಾಲಾ ಎಸ್. ಡಿ ಎಂ ಸಿ ಅಧ್ಯಕ್ಷ ಕೆ.ಕೆ.ಹರೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ ಎಂ.ಎಸ್.ಗಣೇಶ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎಂ.ಜೆ.ರಜನಿಕಾಂತ್,
ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಿಕ್ಷಕರಾದ ಬಿ.ಡಿ.ರಮ್ಯ, ಕೆ.ಗೋಪಾಲಕೃಷ್ಣ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕ ಎಂ.ಗೌತಮ್, ಉಪ ನಾಯಕಿ ಸ್ಪಂದನ, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ಇದಕ್ಕೂ ಮೊದಲು ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ದೈಹಿಕ ಕಸರತ್ತು ವ್ಯಾಯಾಮ ಪ್ರದರ್ಶನ ಹಾಗೂ ರಾಷ್ಟ್ರದ ಸಾರ್ವಭೌಮತ್ವವನ್ನು ಪ್ರತಿಬಿಂಬಿಸುವ ಪಿರಾಮಿಡ್ ರಚಿಸಿ ರಾಷ್ಟ್ರೀಯ ಧ್ವಜವನ್ನು ಎತ್ತಿ ಹಿಡಿದು ಗಮನ ಸೆಳೆದರು.