Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಾಪೋಕ್ಲುವಿನಲ್ಲಿ ದತ್ತಿನಿಧಿ, ಉಪನ್ಯಾಸ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ನಾಪೋಕ್ಲುವಿನಲ್ಲಿ ದತ್ತಿನಿಧಿ, ಉಪನ್ಯಾಸ ಕಾರ್ಯಕ್ರಮ*

January 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜ.27 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸಂಯುಕ್ತಾಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕದತ್ತಿ ಮತ್ತು ಎಸ್ ಎಸ್ ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಾಪೋಕ್ಲವಿನ ಎಕ್ಸೆಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಸಿ.ಕೆ.ತಿಮ್ಮಯ್ಯ ಮಾತನಾಡಿ, ಕೊಡಗಿನ ಸಾಹಿತಿಗಳು ಹಾಗೂ ವೀರಸೇನಾನಿಗಳಾದ ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾರ್ಯಪ್ಪ ಅವರ ಕುರಿತು ಉಪನ್ಯಾಸ ನೀಡಿದರು. ಅಲ್ಲದೇ ವಿದ್ಯಾರ್ಥಿಗಳಿಗೆ ವಿಭಿನ್ನ ಚಟುವಟಿಕೆಗಳ ಮೂಲಕ ರಸಪ್ರಶ್ನೆಯನ್ನು ಕೇಳಿ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ಇದೇ ಶಾಲೆಯಲ್ಲಿ ಕೋಟ್ಯಾಧಿಪತಿ ಎನ್ನುವ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಡುವುದಾಗಿ ತಿಳಿಸಿದರು. ಶಿಕ್ಷಕಿ ಕೆ.ಡಿ.ಶೋಭಿತ ಮಾತನಾಡಿ, ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ ಕುರಿತು ವಿವರಿಸಿದರು. ಕನ್ನಡ ಸಾಹಿತ್ಯದ ಪ್ರಾಚೀನತೆ ಕ್ರಿಸ್ತಶಕ 8 ರಿಂದ 9ನೇ ಯ ಶತಮಾನಕ್ಕೆ ಮೊದಲು ಸಾಹಿತ್ಯಕ ಸಾಕ್ಷಿಗಳು ಇಲ್ಲದಿರುವುದರಿಂದ ಕನ್ನಡ ಸಾಹಿತ್ಯದ ಪ್ರಾರಂಭ ಅಸ್ಪಷ್ಟತೆಯಲ್ಲಿ ಮುಚ್ಚಿಹೋಗಿದೆ ಏಕೆಂದರೆ ಕೆಲವೇ ಶಾಸನ ಪುರಾವೆಗಳು ಲಭ್ಯವಿದ್ದು, ಇತಿಹಾಸದ ಪ್ರಾರಂಭಿಕ ಹಂತಗಳಿಗೆ ಸೇರಿದ ಬಹುತೇಕ ಶಾಸನಗಳನ್ನು ಬ್ರಾಹ್ಮಿ ಲಿಪಿ ಹಾಗೂ ಪ್ರಾಕೃತ ಭಾಷೆಯಲ್ಲಿ ಬರೆಯಲಾಗಿದೆ. ಅವುಗಳಲ್ಲಿ ಬಹು ಪಾಲು ವೀರರಿಗೆ ಗೌರವ ಸಲ್ಲಿಸುವ ಕಿರು ಸ್ಮಾರಕ ದಾಖಲೆಗಳಾಗಿವೆ ಎಂದರು. ಹಲ್ಮಿಡಿ ಶಾಸನ, ಪ್ರಾರಂಭಿಕ ಸಾಹಿತ್ಯ ಕೃತಿಗಳು, ವಿರೋಚಿತ ಹಾಗೂ ಮಹಾಕಾವ್ಯದ ಯುಗ, ಧಾರ್ಮಿಕ ಪ್ರಚಾರದ ಯುಗ, ಪ್ರತಿಭಟನಾ ಯುಗ, ವೈಭವದ ಯುಗ, ಪುನರು ಜೀವನ ಯುಗ, ಹಳೆ ಹಾಗೂ ನಡುಗನ್ನಡ ಸಾಹಿತ್ಯ, ನವೋದಯ, ಮಕ್ಕಳ ಸಾಹಿತ್ಯ, ಜಾನಪದ ಸಾಹಿತ್ಯ, ಕನ್ನಡ ಭಾಷಾಭಿವೃದ್ಧಿ, ನವ್ಯ ಕಾವ್ಯದ ಕಾಲ, ದಲಿತ ಮತ್ತು ಬಂಡಾಯ ಸಾಹಿತ್ಯ, ಆಧುನಿಕ ಸಾಹಿತ್ಯ ಮತ್ತು ಪ್ರತಿಭಟನೆ, ಕನ್ನಡ ಕಾವ್ಯದ ಸುವರ್ಣ ಯುಗ ಸೇರಿದಂತೆ ಹಳೆಗನ್ನಡ ಮತ್ತು ಹೊಸಗನ್ನಡದ ಕವಿವರ್ಯರ ಕುರಿತು ವಿದ್ಯಾರ್ಥಿಗಳ ಮನಮುಟ್ಟುವಂತೆ ಉಪನ್ಯಾಸ ನೀಡಿದರು. ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಪ್ರಾಥಮಿಕವಾಗಿ ಮಾತನಾಡಿ, ತಮ್ಮ ಬದುಕಿನಲ್ಲಿ ಮಾಡಿದ ಸಾಧನೆ ಹಾಗೂ ಅವರು ಹಾಕಿಕೊಟ್ಟ ಮಾರ್ಗದರ್ಶನದ ನೆನಪಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪನೆ ಮಾಡಿರುವ ದತ್ತಿ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ಪರಿಷತ್ತು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂತಹ ದತ್ತಿ ಕಾರ್ಯಕ್ರಮಗಳಿಂದ ಹಲವಾರು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಹೊರ ಸೂಸಲು ಉತ್ತಮ ವೇದಿಕೆ ಸಿಕ್ಕಂತ್ತಾಗಿದೆ. ಆದುದರಿಂದ ದತ್ತಿ ಸ್ಥಾಪನೆ ಮಾಡಲು ಕಾರಣ ಬೇಕಾಗಿಲ್ಲ ಕನ್ನಡದ ಬಗ್ಗೆ ಒಲವಿದ್ದರೆ ಸಾಕು ಎಂದರು. ಇದೇ ಸಂದರ್ಭ ಶಾಲೆಯ ಪ್ರತಿಯೊಬ್ಬ ಶಿಕ್ಷಕರರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದುಕೊಂಡಿರುವುದಕ್ಕಾಗಿ ಅಭಿನಂದಿಸಿದರು. ಶಾಲೆಯ ವಕ್ತಾರ ವಿದ್ಯಾ ಸುರೇಶ್ ಕಾರ್ಯಕ್ರಮವನ್ನು ದೀಪ ಉದ್ಘಾಟಿಸಿ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ.ವಿ.ಪ್ರಭಾಕರ, ನಾಪೋಕ್ಲು ಹೋಬಳಿ ಗೌರವ ಕಾರ್ಯದರ್ಶಿ ಉಮಾ ಪ್ರಭು, ನಿವೃತ್ತ ಶಿಕ್ಷಕಿ ಅಮೆ ಭವಾನಿ, ಶಾಲಾ ಶಿಕ್ಷಕವೃಂದ ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ ಎಂ.ಶರಣ್ಯ ಸ್ವರಚಿತ ಕವನ ವಾಚಿಸಿದರು. ಶಿಕ್ಷಕಿ ಬಿ.ಸಿ.ರಶ್ಮಿ ಸ್ವಾಗತಿಸಿದರು, ಬಿ.ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು. ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಾಳೆಯಡ ದಿವ್ಯ ಮಂದಪ್ಪ ವಂದಿಸಿದರು.

ವರದಿ : ದುಗ್ಗಳ ಸದಾನಂದ

Share. Facebook Twitter Pinterest LinkedIn Tumblr Email WhatsApp
Previous Article*ಬೈತೂರಿಗೆ ಪಾದಯಾತ್ರೆ ಮಾಡಿ ಗಮನ ಸೆಳೆದ ಯುವಕರು*
Next Article *ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.