


ನಾಪೋಕ್ಲು ಜ.27 NEWS DESK : ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯು ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಆರೋಗ್ಯ ಕೇಂದ್ರದ ಆಡಳಿತ ಅಧಿಕಾರಿ ಡಾ.ಪೂವಯ್ಯ ಮಾತನಾಡಿ ಕೊರೋನಾ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ರಕ್ಷಾ ಸಮಿತಿ ಇಲ್ಲದೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗದೆ ಸಮಸ್ಯೆಗಳು ಆಗುತ್ತಿತ್ತು. ಇದೀಗ ನೂತನ ಸಮಿತಿ ಆಯ್ಕೆಯಾಗಿ ಕಾರ್ಯ ಪ್ರವೃತ್ತವಾಗುತ್ತಿದೆ. ಇಲ್ಲಿಗೆ ಬೇಕಾದ ಅವಶ್ಯಕತೆಗಳನ್ನು ಪರಿಶೀಲಿಸಿ ರೋಗಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಸಹಕಾರಿಯಾಗಲಿದೆ ಎಂದರು. ಸಭೆಯಲ್ಲಿ ಸಮಿತಿ ಸದಸ್ಯ ಲೆಕ್ಕಪತ್ರವನ್ನು ಪರಿಶೀಲಿಸಿ ಮಾಹಿತಿಗಳನ್ನು ಪಡೆದುಕೊಂಡು ಮುಂದೆ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಯಿತು. ರಕ್ಷಾ ಸಮಿತಿಯ ನೂತನ ಸದಸ್ಯರು ಹಾಗೂ ಆಡಳಿತ ಅಧಿಕಾರಿ ಪೂವಯ್ಯ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷ ಕಂಗಂಡ ಶಶಿ, ಸಮಿತಿ ಸದಸ್ಯ ಟಿ.ಆರ್.ರಾಜಪ್ಪ, ಎ.ಸಿ.ಶಾಂತಿ, ಬಿ.ವಿ.ಮೊಹಮ್ಮದ್ ಅಶ್ರಫ್, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ, ಡಾ.ಜೀವನ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಡಯಾನ ಪ್ರಾರ್ಥಿಸಿದರು. ಎ.ಕೆ.ಕರಿಷ್ಮಾ ವರದಿ ವಾಚಿಸಿದರು. ಎಸ್.ಡಿ.ಭವ್ಯ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ವರದಿ : ದುಗ್ಗಳ ಸದಾನಂದ









