
ಕುಶಾಲನಗರ ಜ.27 NEWS DESK : ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ವಾರ್ಡ್ ಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಕೂಡುಮಂಗಳೂರು ಗ್ರಾ.ಪಂ ನ ಎರಡನೇ ವಾರ್ಡ್ ಸುಂದರನಗರ, ನವಗ್ರಾಮ, ಬಸವೇಶ್ವರ ಬಡಾವಣೆ ಹಾಗೂ ವಿನಾಯಕ ಬಡಾವಣೆಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗನೇ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ನರೇಗಾ ಯೋಜನೆಯಡಿ ಸರ್ಕಾರದ ಸವಲತ್ತುಗಳನ್ನು ಪಡೆಯುವ ಬಗ್ಗೆ, ಪರಿಶಿಷ್ಠ ಜಾತಿ ಹಾಗೂ ಪಂಗಡದವರಿಗೆ ಸರ್ಕಾರದಿಂದ ನೀಡಲಾಗಿರುವ ಯೋಜನೆಗಳ ಬಗ್ಗೆ, ಅಂಬೇಡ್ಕರ್ ಹಾಗೂ ಬಸವ ವಸತಿ ಯೋಜನೆಯಡಿ ಮನೆ ಪಡೆ ಸೇರಿದಂತೆ ಇನ್ನಿತರ ಸರ್ಕಾರಿ ಯೋಜನೆಗಳ ಬಗ್ಗೆ ಕೆ.ಬಿ.ಶಂಶುದ್ಧೀನ್ ಸ್ಥಳೀಯರಿಗೆ ಮಾಹಿತಿ ನೀಡಿದರು. ದಶಕಗಳಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ನಿವೇಶನ ರಹಿತರು ನಿವೇಶನ ಕೋರಿ ಪಂಚಾಯಿತಿಗೆ ಅರ್ಜಿ ಸಲ್ಲಿಸುವಂತೆ ಮಾಹಿತಿ ನೀಡಿದರು. ನಂತರ ಮಾತನಾಡಿದ ಅವರು, ವಾರ್ಡ್ ನಲ್ಲಿ ಹಂತಹಂತವಾಗಿ ಹಲವು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು. ಈ ಸಂಬಂಧ ಶಾಸಕರ ಬಳಿ ಮನವಿ ಮಾಡಿಲಾಗಿದೆ. ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು. ಈ ಸಂದರ್ಭ ಸ್ಥಳೀಯ ನಿವಾಸಿಗಳು ಇದ್ದರು.









