Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೃಪಾ ದೇವರಾಜ್ ಅವರ ಮರ್ಮರ ಕಥಾ ಸಂಕಲನಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೃಪಾ ದೇವರಾಜ್ ಅವರ ಮರ್ಮರ ಕಥಾ ಸಂಕಲನಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ*

ಜನವರಿ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಬೆಳಗಾವಿ ಜಿಲ್ಲೆಯ ಆಜುರ ಪ್ರತಿಷ್ಠಾನದ ವತಿಯಿಂದ ಕೃಪಾ ದೇವರಾಜ್ ಅವರ ಮರ್ಮರ ಕಥಾ ಸಂಕಲನಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೋಗೇರಿಯಲ್ಲಿ ಆಜೂರ ಕುಟುಂಬದ ತೋಟದ ಮಹಾಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ಆಜೂರ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದ ರಮೇಶ್ ಗುಬ್ಬಿ ಕಾರವಾರ, ಕೃಪಾ ದೇವರಾಜ್ ಮಡಿಕೇರಿ, ಎ.ಎಂ.ಜಯಶ್ರೀ ಬಳ್ಳಾರಿ, ಡಾ.ತಿಪ್ಪೇಸ್ವಾಮಿ ಹುನಗುಂದ, ಡಾ.ಅಶೋಕ ನರೋಡೆ ಮಹಾಲಿಂಗಪುರ, ವಿಜಯ ಬಡಿಗೇರ ಇಟಗಿ, ಭಾಗ್ಯಶ್ರೀ ಗವಿಸಿದ್ಧಯ್ಯ ಗದಗ, ಟಿ.ಎಸ್.ವಂಟಗುಡಿ ಹಿಟಗಲ್ಲು ಅವರನ್ನು ಶಾಲು ಹೊದಿಸಿ, ಪ್ರಶಸ್ತಿ ಫಲಕ, ನಗದು ನೀಡಿ ಸನ್ಮಾನಿಸಲಾಯಿತು. ಆಜೂರ ಪ್ರತಿಷ್ಠಾನದ ಪ್ರತಿಷ್ಠಿತ ರಾಜ್ಯ ಮಟ್ಟದ ಪ್ರಶಸ್ತಿ ಸಮಾರಂಭವನ್ನು ಶ್ರೀ ಶಿವಾನಂದ ಮಹಾಸ್ವಾಮಿ, ಶ್ರೀ ಶಶಿಕಾಂತ ಗುರೂಜಿ ದರೂರ, ಶ್ರೀ ವಿಠಲ ಶರಣರು ಇನ್ನಿತರ ಸ್ವಾಮೀಜಿಗಳ ಸಾನಿಧ್ಯದಲ್ಲಿ, ನೇತಾರಾದ ಬಸವರಾಜ ಆಜೂರ ಹಾಗೂ ಪ್ರಶಸ್ತಿ ಪುರಸ್ಕೃತರಾದ ಸಾಹಿತಿಗಳ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಾನಂದ ಮಹಾಸ್ವಾಮಿ ಮಾತನಾಡಿ, ಆಯ್ಕೆಗೆ ಬಂದ ಅಷ್ಟೂ ಪುಸ್ತಕಗಳನ್ನು ಓದಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡುವುದು ಸುಲಭದ ವಿಷಯವಾಗಿರಲಿಲ್ಲ, ಪ್ರತಿಯೊಂದು ಪುಸ್ತಕವನ್ನು ತಾವೇ ಖುದ್ದಾಗಿ ಓದಿ ಆಯ್ಕೆ ಮಾಡಿದುದನ್ನು ವೇದಿಕೆಯಲ್ಲಿ ನುಡಿದರು. ಬಂದಂತಹ ಪ್ರತೀ ಕೃತಿಯೂ ಉತ್ತಮವಾಗಿದ್ದು, ಆಯ್ಕೆ ಸಮಿತಿಯ ಮಾನದಂಡದ ಮೇಲೆ ಪುರಸ್ಕಾರ ಯೋಗ್ಯವಾದ ಕೃತಿಗಳನ್ನು ಆಯ್ಕೆ ಮಾಡಲಾಯಿತು ಎಂದರು. ಕಳೆದ ಮೂವತ್ತೈದು ವರ್ಷಗಳಿಂದಲೂ ನೀಡಲಾಗುತ್ತಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾಡಿನ ಹಲವಾರು ಸಾಹಿತಿಗಳು ಭಾಜನರಾಗಿದ್ದಾರೆ ಎಂದರು. ಪ್ರತಿಷ್ಠಾನದ ಶಾಲಾ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು. ಕೃಪಾ ದೇವರಾಜ್ “ಭಾವದ ಕದತಟ್ಟಿ” ಕವನ ಸಂಕಲನ, “ಮರ್ಮರ” ಕಥಾ ಸಂಕಲನ, “ಚೌಚೌ ಬಾತ್” ಲಲಿತ ಪ್ರಬಂಧಗಳ ಸಂಕಲನ ಹಾಗೂ “ಕಾರ್ಪಣ್ಯದ ಹೂವು” ಕವನ ಸಂಕಲನ ಕೃತಿಗಳನ್ನು ರಚಿಸಿದ್ದಾರೆ. ಮಡಿಕೇರಿಯಲ್ಲಿ ವಾಸವಿರುವ ಇವರು, ಮಡಿಕೇರಿ ತಾಲೂಕು ಕಚೇರಿಯ ಶಿರಸ್ತೆದಾರರಾದ ಪಿ.ಎಲ್.ದೇವರಾಜ್ ಅವರ ಪತ್ನಿ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.