ಚೆಟ್ಟಳ್ಳಿ ಜ.28 NEWS DESK : ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿದರು.
ಸಿಬ್ಬಂದಿ ಕೊರತೆ, ಭದ್ರತೆ ಕೊರತೆ, ಖಾಯಂ ವೈದ್ಯರಿಲ್ಲ ದಿರುವುದು, ನೂತನ ಕಟ್ಟಡ ನಿರ್ಮಾಣ ಹೀಗೆ ಹತ್ತು ಹಲವು ಸಮಸ್ಯೆಗಳ ದೂರಿನ ಮೇರೆಗೆ ಭೇಟಿ ನೀಡಿದ ಶಾಸಕರು, ವೈದ್ಯರಾದ ರಮ್ಸನ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಇಂದೂಧರ್, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಆಸ್ಪತ್ರೆಯ ಜಾಗದ ದಾಖಲಾಯಿತಿಯ ಸಮಸ್ಯೆಯಿಂದ ಆರೋಗ್ಯ ಇಲಾಖೆ ನೂತನ ಕಟ್ಟಡ ನಿರ್ಮಿಸಲು ಮುಂದಾಗದಿರುವ ಬಗ್ಗೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದಾಗ ಈ ಕುರಿತು ಸಂಬಂಧಪಟ್ಟ ಅಧಿಕಾರಿಯೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಚೆಟ್ಟಳ್ಳಿ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿ ಪಡಿಸಲಾಗುವುದೆಂದು ಭರವಸೆ ನೀಡಿದರು.