ವಿರಾಜಪೇಟೆ ಜ.29 NEWS DESK : ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೂಲತಃ ವಿರಾಜಪೇಟೆಯವರಾದ ಪಾಪನೋಗಿನಿಯ ದೇಶದ ಬಿಷಪ್ ರೋಸಾರಿಯೋ ಮೆನೇಜಸ್ ದ್ವಜಾರೋಹಣ ನೆರವೇರಿಸಿ ಮಾತನಾಡಿ ಭಾರತವು ವೈವಿಧ್ಯತೆಗಳಿಂದ ಕೂಡಿರುವ ದೇಶ. ಸಂವಿಧಾನವು ಶ್ರೇಷ್ಠ ಕಾನೂನಾಗಿದ್ದು, ಪ್ರತಿಯೊಬ್ಬರು ಗೌರವಿಸಬೇಕು ಎಂದು ಹೇಳಿದರು. ಪ್ರಜಾಪ್ರಭುತ್ವದ ಆಶಯದಂತೆ ಸ್ವತಂತ್ರ, ಸಮಾನತೆ, ಭ್ರಾತೃತ್ವ ಮತ್ತು ಕಾನೂನುನ್ನು ಪಾಲಿಸಿ ರಾಷ್ಟ್ರಕ್ಕೆ ಗೌರವವನ್ನು ಸೂಚಿಸಬೇಕು. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಹಾಗೂ ಪ್ರಧಾನ ಧರ್ಮ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಸಂತ ಅನ್ನಮ್ಮ ಪಿ. ಯು. ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಜೋಕಿಂ ರಾಡ್ರಿಗೀಸ್ ಉಪಸ್ಥಿತರಿದ್ದರು. ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಧ್ವಜ ವಂದನೆ ನಡೆಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಶಿಕ್ಷಕರಾದ ಗಂಗಾಧರ್ ಕಾರ್ಯಕ್ರಮವನ್ನು ನಿರೂಪಿಸಿದರು.