Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಲ ಪಡೆದವರಿಗೆ ಸಾಲ ಮರುಪಾವತಿ ಮಾಡುವ ಸಾಮರ್ಥ್ಯ ಇದೆಯೇ ಎಂದು ಗಮನಿಸಿ : ಆರ್‌ಬಿಐ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಲ ಪಡೆದವರಿಗೆ ಸಾಲ ಮರುಪಾವತಿ ಮಾಡುವ ಸಾಮರ್ಥ್ಯ ಇದೆಯೇ ಎಂದು ಗಮನಿಸಿ : ಆರ್‌ಬಿಐ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ*

ಜನವರಿ 29, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.29 : ಫೈನಾನ್ಸ್, ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್‌ಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಫಾನ್ ಬ್ರೋಕರ್‌ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್‌ಬಿಐ ಮಾರ್ಗಸೂಚಿ ಪ್ರಕಾರ 2 ಲಕ್ಷ ರೂ.ವರೆಗೆ ಮಾತ್ರ ಸಾಲ ನೀಡಬಹುದಾಗಿದೆ. ಆದರೆ ಸಾಲ ನೀಡುವಾಗ ಸಾಲ ಪಡೆಯುವವರು ಸಾಲ ಮರುಪಾವತಿ ಮಾಡುವ ಸಾಮರ್ಥ್ಯ ಇದೆಯೇ ಎಂದು ಗಮನಿಸಿ ಸಾಲವನ್ನು ನೀಡಬೇಕು. ಅದನ್ನು ಬಿಟ್ಟು ಕಿರುಕುಳ ನೀಡುವುದು ಸರಿಯಲ್ಲ ಎಂದು ಹೇಳಿದರು.
ಸಾರ್ವಜನಿಕರಿಗೆ ತೊಂದರೆಯಾಗದAತೆ ಗಮನಹರಿಸುವುದು ಎಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ತಾವೂ ಸಹ(ಪೈನಾನ್ಸ್ ಕಂಪನಿಗಳು) ಕಾನೂನು ನಿಯಮಾನುಸಾರ ನಡೆದುಕೊಳ್ಳಬೇಕು. ಅದು ಬಿಟ್ಟು ದೌರ್ಜನ್ಯ ನಡೆಯುವುದು ಕಂಡುಬಂದರೆ ನಿಯಮಾನುಸಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು. ಪ್ರತಿಯೊಬ್ಬರಲ್ಲಿಯೂ ಆರ್ಥಿಕ ಶಿಸ್ತು ಇರಬೇಕು. ಅದನ್ನು ಬಿಟ್ಟು ಹೆಚ್ಚುವರಿ ಸಾಲವನ್ನು ನೀಡುವುದು. 5 ಗಂಟೆಯ ನಂತರ ಸಾಲ ವಸೂಲಾತಿ ಮಾಡಲು ಹೋಗುವುದು. ಇಂತಹ ಪ್ರಕರಣಗಳು ವರದಿಯಾಗಬಾರದು. ಎಲ್ಲರ ರಕ್ಷಣೆ ಅತ್ಯಗತ್ಯ. ಆ ನಿಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಸಾಲ ವಸೂಲಾತಿ ಮಾಡುವಾಗ ಹೆದರಿಸಬಾರದು. ಹೆದರಿಸುವುದು ಕಂಡುಬಂದಲ್ಲಿ ಸೋ-ಮೋಟೋ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದರು.
ದಬ್ಬಾಳಿಕೆ ಮಾಡಿ ವಸೂಲಾತಿ ಮಾಡಬಾರದು. ಪ್ರತಿಯೊಬ್ಬರ ನಾಗರಿಕ ರಕ್ಷಣೆ ಅತಿಮುಖ್ಯ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾಲ ಪಡೆಯುವವರಿಗೆ ಲೋನ್ ಶೀಟ್ ನೀಡಬೇಕು. ಕಾನೂನು ಚೌಕಟ್ಟಿನಲ್ಲಿರಬೇಕು. ಎಂದು ವಿವರಿಸಿದರು. ಆರ್‌ಬಿಐ ಮಾರ್ಗಸೂಚಿಯನ್ನು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಿಸಿ ಅಳವಡಿಸಬೇಕು. ಸಾಲದ ಬಡ್ಡಿ ಬಗ್ಗೆ ಮಾಹಿತಿ ಇರಬೇಕು. ಜನರಿಗೆ ತೊಂದರೆ ನೀಡಬಾರದು, ಕಾಲಾವಕಾಶ ನೀಡಬೇಕು ಎಂದರು. ಸಾಲ ಪಡೆದು ಫೈನಾನ್ಸ್ ಕಂಪನಿಗಳ ವಿರುದ್ದ ತಿರುಗಿ ಬೀಳುವುದು ಕಂಡುಬಂದರೂ ಸಹ ಸಹಾಯವಾಣಿಗೆ ಕರೆ ಮಾಡಬಹುದು. ಒಟ್ಟಾರೆ ಸಮಾಜದಲ್ಲಿ ಶಾಂತಿಯುತ ಬದುಕು ನಡೆಸಬೇಕು. ಎಲ್ಲರ ರಕ್ಷಣೆಯು ಆಡಳಿತದ ಅತೀಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಜಿಲ್ಲೆಯಲ್ಲಿ ನೋಂದಣಿಯಾಗಿರುವ ಮತ್ತು ನೋಂದಣಿಯಾಗದಿರುವ ಮೈಕ್ರೋ ಪೈನಾನ್ಸ್ ಕಂಪನಿಗಳ ಮಾಹಿತಿ ಒದಗಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು. ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧಿತ ದೂರುಗಳನ್ನು ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 08272-228330 ಅಥವಾ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಮ್ ಸಂಖ್ಯೆ 08272-221077 ಗೆ ನೀಡಬಹುದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಒಬ್ಬರಿಗೆ ಒಂಬತ್ತು ಕಂಪನಿಗಳು ಸಾಲ ನೀಡಿರುವುದು ಕಂಡುಬAದಿದೆ. ಸಾಲ ನೀಡುವಾಗ ಪರಿಶೀಲಿಸಬೇಕು. ಅದನ್ನು ಬಿಟ್ಟು ದೌರ್ಜನ್ಯ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಮೈಕ್ರೋ ಪೈನಾನ್ಸ್ ಕಂಪನಿಯ ಪ್ರತಿನಿಧಿಯೊಬ್ಬರು ಸಾಲ ಪಡೆದವರು ಸಾಲ ವಾಪಸ್ಸು ನೀಡಲು ಮುಂದೆ ಬರುತ್ತಿಲ್ಲ. ನಮ್ಮ ಮೇಲೆಯೇ(ಪೈನಾನ್ಸ್ ಕಂಪನಿಗಳ ಮೇಲೆ) ದೌರ್ಜನ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು.
ಪ್ರೊ.ಐಪಿಎಸ್ ಅಧಿಕಾರಿ ಬೆನಕ ಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇದ್ದರು.
ಇನ್ನಷ್ಟು ಮಾಹಿತಿ:-ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಂದ ಆಗುತ್ತಿರುವ ಕಿರುಕುಳಗಳ ಕುರಿತು ಮುಖ್ಯಮಂತ್ರಿ ಅವರು ಜಿಲ್ಲಾಮಟ್ಟದಲ್ಲಿ ನಿಗಾವಹಿಸಲು ನಿರ್ದೇಶನ ನೀಡಿದ್ದಾರೆ. ಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಾರ್ಯ ನಿರ್ವಹಿಸುತ್ತಿರುವ ವಿಚಾರದ ಬಗ್ಗೆ ಚರ್ಚಿಸಲಾಗಿರುತ್ತದೆ. ಈ ಸಭೆಯಲ್ಲಿ ಚರ್ಚಿಸಿದಂತೆ ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಕಾನೂನು ಬಾಹಿರವಾಗಿ ಸಾಲ ವಸೂಲಾತಿ ಮಾಡುವಂತಿಲ್ಲ. ಯಾವುದೇ ಕಾರಣಕ್ಕೂ ಸಾಲಗಾರರ ಮೇಲೆ ಬಾಕಿ ವಸೂಲಾತಿಗಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಒತ್ತಡ ಹೇರತಕ್ಕದ್ದಲ್ಲ. ಸಾಲ ಬಾಕಿ ವಸೂಲಾತಿ ನೆಪದಡಿ ಸಾಲಗಾರರ ಮನೆ/ಕೌಂಪೌಂಡ್/ಗೋಡೆ ಇತ್ಯಾದಿಗಳ ಮೇಲೆ ಗೋಡೆಬರಹ ಬರೆಯುವುದು / ಅಂಟಿಸುವುದು ಮುಂತಾದ ಕಾರ್ಯ ನಡೆಸತಕ್ಕದ್ದಲ್ಲ. ಸಾಲ ವಸೂಲಾತಿ ವಿಚಾರವಾಗಿ ದೌರ್ಜನ್ಯ / ಅಸಭ್ಯ ವರ್ತನೆ ತೋರುವುದು, ಅಥವಾ ಬಲತ್ಕಾರವಾಗಿ ಚರಾಸ್ಥಿ / ಸ್ಥಿರಾಸ್ಥಿ ಜಪ್ತಿ ಮಾಡುವಂತಿಲ್ಲ. ನೋಂದಣಿಯಾಗಿರದ ಯಾವುದೇ ಮೈಕ್ರೋ ಪೈನಾನ್ಸ್ ಕಂಪೆನಿಗಳು ಕಾರ್ಯಾಚರಿಸುವಂತಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿಗಧಿಪಡಿಸಿದ ಗರಿಷ್ಟ ಬಡ್ಡಿದರಕ್ಕಿಂತ ಹೆಚ್ಚಿನ ಬಡ್ಡಿದರ ವಿಧಿಸತಕ್ಕದ್ದಲ್ಲ/ ವಸೂಲಿಸತಕ್ಕದ್ದಲ್ಲ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಮೇಲೆ ತಿಳಿಸಿದಂತೆ ಅಥವಾ ಇನ್ಯಾವುದೇ ರೀತಿಯಿಂದ ಸಾಲಗಾರರಿಗೆ ಕಿರುಕುಳ ನೀಡಿದಲ್ಲಿ, ಸಾಲಗಾರರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಲ್ಲಿ ಅಥವಾ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.