


ಮಡಿಕೇರಿ ಜ.30 NEWS DESK : ಮೂರ್ನಾಡಿನಲ್ಲಿ ಹಲ್ಲೆಗೆ ಒಳಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರನ್ನು ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿಯಾಗಿ ಸಾಂತ್ವನ ಹೇಳಿದರು. ಅರ್ಚಕರಿಗೆ ಧೈರ್ಯ ತುಂಬಿದ ಶಾಸಕರು ಕಾನೂನು ಕ್ರಮದ ಭರವಸೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.