


ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸರ್ವೋದಯ ದಿನವನ್ನು ಆಚರಿಸಲಾಯಿತು. ಕಚೇರಿ ಆವರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಗೌರವಸಲ್ಲಿಸಿದರು.