ಮಡಿಕೇರಿ ಜ.30 NEWS DESK : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಹಲ್ಲೆ ಮಾಡಿದವರನ್ನು ತಕ್ಷಣ ಪೊಲೀಸರು ಬಂಧಿಸಬೇಕೆಂದು ಮೂರ್ನಾಡು ಅಯ್ಯಪ್ಪ ಯುವಕ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಘ್ನೇಶ್ ಭಟ್ ಹಾಗೂ ಅವರ ತಾಯಿಯ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿರುವುದು ಖಂಡನೀಯ. ಪೊಲೀಸ್ ಇಲಾಖೆ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.