Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*

ಜನವರಿ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.30 NEWS DESK : ಒಳಮೀಸಲಾತಿಯನ್ನು ಶೀಘ್ರ ಜಾರಿಗೆ ತರಬೇಕೆಂದು ಒತ್ತಾಯಿಸಿ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದ ಪ್ರೊ.ಬಿ.ಕೃಷ್ಣಪ್ಪ ಅವರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ. ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಒಳಮೀಸಲಾತಿ ವರ್ಗೀಕರಣದ ವಿಚಾರವಾಗಿ ಈಗಿನ ಸರಕಾರ ವಿಳಂಬ ಧೋರಣೆ ತಾಳಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಪೀಠಿಕೆಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವ ಆಶಯವನ್ನು ಬರೆದಿದ್ದಾರೆ. ಅದರ ಅನುಷ್ಠಾನಕ್ಕಾಗಿ ಸಂವಿಧಾನದ 15, 16ರ ಅನುಚ್ಛೇದದಲ್ಲಿ ಶೋಷಿತ ಸಮುದಾಯಗಳು ಸಮಾನವಾಗಿ ಬದುಕಲು ಮೀಸಲಾತಿ ಕಲ್ಪಿಸುವ ಮೂಲಭೂತ ಹಕ್ಕನ್ನು ನೀಡಿದ್ದಾರೆ. ಆದರೆ ಕರ್ನಾಟಕದಲ್ಲಿ ಚರ್ಮಗಾರಿಕೆಗೆ ಸಂಬಂಧಿಸಿದ ಮಾದಿಗ, ಸಮಗಾರ, ಡೋಹರ, ದಕ್ಕಲಿಗ, ಮಚ್ಚಗಾರ ಮತ್ತು ಇತರೆ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗದಿರುವ ಕಾರಣ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿದಿದ್ದಾರೆ ಎಂದು ಆರೋಪಿಸಿದರು. ಈ ಅಸಮಾನತೆಯ ಸಂತ್ರಸ್ತರಾದ ಮಾದಿಗರು, ದಲಿತರು ಹಾಗೂ ಪ್ರಗತಿಪರ ಸಂಘಟನೆಗಳು ಕಳೆದ 30 ವರ್ಷಗಳಿಂದ ತ್ಯಾಗ ಬಲಿದಾನದ ಮೂಲಕ ನಿರಂತರ ಹೋರಾಟ ಮಾಡಿದ ಪರಿಣಾಮ ನ್ಯಾಯಾಲಯವು ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಸಂವಿಧಾನಬದ್ಧವಾಗಿ ರಾಜ್ಯ ಸರಕಾರಗಳೇ ಒಳಮೀಸಲಾತಿ ವರ್ಗೀಕರಣವನ್ನು ಜಾರಿ ಮಾಡಬಹುದೆಂದು ಆದೇಶಿಸಿದೆ. ಆದರೂ ಒಳಮೀಸಲಾತಿ ವರ್ಗೀಕರಣವನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದರು. ನ್ಯಾ.ಸದಾಶಿವ ಆಯೋಗದ ವರದಿಯ ಒಳಮೀಸಲಾತಿ ವರ್ಗೀಕರಣದ ಶಿಫಾರಸ್ಸನ್ನು ಪರಿಗಣಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ.17 ರ ಅನುಪಾತದಲ್ಲಿ ಹೆಚ್ಚುವರಿ ಶೇ.2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಎ.ಬಿ.ಸಿ.ಡಿ ವರ್ಗೀಕರಣದ ಗುಂಪುಗಳಿಗೆ ಸಮಾನವಾಗಿ ಹಂಚಬೇಕು. ಅದರಲ್ಲಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ.7 ಮೀಸಲಾತಿಯನ್ನು ನಿಗಧಿಪಡಿಸಬೇಕು. ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಬಜೆಟ್‍ನಲ್ಲಿ ಮತ್ತು ಎಸ್‍ಸಿಎಸ್‍ಪಿ/ಟಿಎಸ್‍ಪಿ ಅನುದಾನದಲ್ಲಿ ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಅಧಾರದ ಮೇಲೆ ಪ್ರತ್ಯೇಕವಾಗಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪ್ರಮುಖರು ಆಗ್ರಹಿಸಿದರು. ಜಿಲ್ಲಾ ಸಂಘಟನಾ ಸಂಚಾಲಕರಾದ ಮನೋಜ್ ಕುಮಾರ್ ಸೋಮವಾರಪೇಟೆ, ಬೋಜ ವಿರಾಜಪೇಟೆ, ಭಾವ ಮಾಲ್ದಾರೆ, ಜಿಲ್ಲಾ ಖಜಾಂಚಿ ರಾಮಚಂದ್ರ ಮಡಿಕೇರಿ, ಜಿಲ್ಲಾ ಸಮಿತಿ ಸದಸ್ಯ ಕುಳಿಯ, ಮಡಿಕೇರಿ ತಾಲ್ಲೂಕು ಸಂಚಾಲಕಿ ಗೌರಮ್ಮ, ವಿರಾಜಪೇಟೆ ಸಂಚಾಲಕಿ ಮಂಜುಳಾ, ಬೆಳ್ಳಿ, ಕೆದಮುಳ್ಳೂರು ಗ್ರಾಮ ಸಂಚಾಲಕ ರಘು, ಅಣ್ಣಪ್ಪ, ತಮ್ಮಯ್ಯ, ಕುಮಾರ್, ಚಿಪ್ಪಣ್ಣ, ನಿತಿನ್, ಮಂಜು, ಸುಬ್ರಮಣಿ, ಕಮಲ, ರತ್ನ, ದೇವಿ, ಸಂಜು ಮನವಿ ನೀಡುವ ಸಂದರ್ಭ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.