Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ  ಮಾಡಬಾರದು : ಸಿಎಂ*
ಇತ್ತೀಚಿನ ಸುದ್ದಿಗಳು

*ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ  ಮಾಡಬಾರದು : ಸಿಎಂ*

January 31, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ NEWS DESK ಜನವರಿ 31: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ  ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು  ಮುಖ್ಯಮಂತ್ರಿಗಳು ತಿಳಿಸಿದರು. ಯಾವ ಪಕ್ಷ ನುಡಿದಂತೆ ನಡೆಯುತ್ತದೆ, ಜನಪರವಾಗಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷ ಎಂಟು ತಿಂಗಳಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದೊಳಗೆ ಈಡೇರಿಸಿದ್ದೇವೆ. ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಮಾಡಿರುವುದು ನಮ್ಮ ಸರ್ಕಾರ ಎಂದರಲ್ಲದೇ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸಮಾನತೆಯನ್ನು ತರುವ ಪ್ರಯತ್ನವನ್ನು ಮಾಡಿದ್ದೇವೆ ಎಂದರು. ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು.  ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ  ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು ಎಂದರು. ನಮ್ಮ ಸರ್ಕಾರ ಸಂವಿಧಾನದ ಆಶಯಗಳನ್ನು ಈಡೇರಿಸುತ್ತಿದೆ.  ಪ್ರತಿ ಸರ್ಕಾರವೂ ತನ್ನ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಸಂವಿಧಾನವು ಸ್ವಾತಂತ್ರö್ಯ ಸಮಾನತೆ, ಭ್ರಾತೃತ್ವವನ್ನು ಸಾರುತ್ತದೆ. ಭ್ರಾತೃತ್ವವನ್ನು ನಾವು ಬೆಳೆಸಬೇಕು. ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಸಮಾಜವನ್ನು ಒಗ್ಗೂಡಿಸುವುದು ನಮ್ಮ ಕರ್ತವ್ಯ. ಮೂಲತ: ಮನುಷ್ಯರಾಗಿರುವ ನಾವು ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ಅಂತಿಮವಾಗಿ ಜಾತಿ ವ್ಯವಸ್ಥೆ ತೊಲಗಿ  ಭಾರತೀಯರಾಗಿ ಬದುಕಬೇಕು. ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು  ಕಾಂಗ್ರೆಸ್ ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದೆ ಎಂದರು. ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮವನ್ನು ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಜಯಗೊಳಿಸಿದ ಕೊಡುಗಿನ ಜನತೆಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಅಭಿನಂದಿಸಿದರು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ. 2013-18ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಆದರೆ 2018ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ , ತಾನು ನೀಡಿದ್ದ ಭರವಸೆಗಳಲ್ಲಿ ಶೇ.10 ರಷ್ಟನ್ನು ಕೂಡ ಈಡೇರಿಸಲಿಲ್ಲ ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
Next Article *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.