ಮಡಿಕೇರಿ ಫೆ.1 NEWS DESK : ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಆತಂಕ ಮೂಡಿಸಿದ ಕಾಜೂರು ಕರ್ಣ (40) ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿ ಸೆರೆಹಿಡಿದರು. ಈ ಹಿನ್ನೆಲೆಯಲ್ಲಿ ಶಾಸಕ ಡಾ.ಮಂತರ್ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.