ಮಡಿಕೇರಿ ಫೆ.1 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಎಎಸ್‌ಐಗಳಾದ ಬಿ.ಎನ್.ಸತ್ಯಮೂರ್ತಿ ಮತ್ತು ಪಿ.ಡಿ.ಪ್ರಕಾಶ್ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.