ಮಡಿಕೇರಿ NEWS DESK ಫೆ.2 : ನಾಗರಹೊಳೆ ಉದ್ಯಾನದಲ್ಲಿ ಕಡವೆ ಬೇಟೆಯಾಡಲು ಹೊಂಚು ಹಾಕುತ್ತಿದ್ದ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟಂದಿ ಗ್ರಾಮದ ಐವರು ಆರೋಪಿಗಳು ಬಂಧಿಸಲ್ಪಟ್ಟಿದ್ದಾರೆ. ಇವರನ್ನು ಹೆಚ್ಚಿನ ವಿಚಾರಣೆಗೆ ಒಳ ಪಡಿಸಿದಾಗ ಎರಡು ದಿನಗಳ ಹಿಂದೆ ಕಡವೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಂಡಿರುವ ವಿಚಾರ ತಿಳಿದು ಬಂದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕುಟ್ಟಂದಿ ಗ್ರಾಮದ ಮೋಟಯ್ಯ, ನಾಚಪ್ಪ, ಸತೀಶ್, ಚಂದನ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ಕಾರು, ಎರಡು ಎಸ್.ಬಿ.ಬಿ.ಎಲ್. ಒಂಟಿ ನಳಿಕೆಯ ಲೋಡ್ ಮಾಡಿದ್ದ ಬಂದೂಕು, 11ಜೀವಂತ ಕಾಡತೂಸು, ಟಾರ್ಚ್, ಮೊಬೈಲ್‌ಗಳು, ಚೂರಿ, ಪ್ಲಾಸ್ಟಿಕ್ ಚೀಲ, ಕತ್ತಿ, ಅರ, ಟಾರ್ಪಲ್ ಹಾಗೂ ಒಂದು ಬ್ಯಾಗ್‌ನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಫೆ1.ರಂದು ಮುಂಜಾನೆ 3.30ರ ಸುಮಾರಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ಬೆನ್ನಟ್ಟಿದ ಗಸ್ತು ನಡೆಸುತ್ತಿದ್ದ ಅರಣ್ಯ ಸಿಬ್ಬಂದಿಗಳು ಆನೆಚೌಕೂರು ಗೇಟ್ ಜಡೆ ಆಲದಮರ ಗೇಟ್ ಸಮೀಪ ಅಡ್ಡಗಟ್ಟಿ ನಿಲ್ಲಿಸಿದರು. ತಪಾಸಣೆ ನಡೆಸಿದ ಸಂದರ್ಭ ಐವರು ಆರೋಪಿಗಳು ಕಾರಿನಲ್ಲಿ ಎರಡು ಒಂಟಿ ನಳಿಕೆ ಬಂದೂಕು ಮತ್ತಿತರ ಪರಿಕರಗಳೊಂದಿಗೆ ಸಿಕ್ಕಿ ಬಿದ್ದರು. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಎರಡು ದಿನಗಳ ಹಿಂದೆ ಕಡವೆಯನ್ನು ಬೇಟೆಯಾಡಿ ಮಾಂಸ ಹಂಚಿಕೊಂಡಿರುವ ಕುರಿತು ಮಾಹಿತಿ ಲಭಿಸಿದೆ. ಎಸಿಎಫ್ ಎನ್.ಲಕ್ಷ್ಮೀಕಾಂತ್ ಹಾಗೂ ಆರ್‌ಎಫ್‌ಓ ಕೆ.ಇ.ಸುಬ್ರಮಣ್ಯ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Breaking News
- *ನಾಗರಹೊಳೆಯಲ್ಲಿ ಬೇಟೆ : ಕೊಡಗಿನ ಆರೋಪಿಗಳ ಬಂಧನ*
- *ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ : ಆರೋಪಿಗಳ ಬಂಧನ*
- *ಸಾಮಾನ್ಯ ವರ್ಗಕ್ಕೆ ಸಹಾಯವಾಗದ ಬಜೆಟ್*
- *ಸ್ವಾವಲಂಬಿ ಭಾರತಕ್ಕೆ ಪೂರಕವಾದ ಜನಪರ ಬಜೆಟ್*
- *ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್*
- *ಮಡಿಕೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ : ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಕೊಡುಗೆ ಅಪಾರ : ಬಿ.ಸಿ.ಶಂಕರಯ್ಯ*
- *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು : ಅನೂಪ್ ಮಾದಪ್ಪ ಕರೆ*
- *ದೀಪ್ತಿ ದೇಚಮ್ಮ ಗೆ ಪಿ.ಹೆಚ್.ಡಿ ಪದವಿ ಪ್ರದಾನ*
- *ಜನಪರ ಮತ್ತು ರೈತಪರ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ*
- *ರಾಜ್ಯದ ಹಿತಕ್ಕೆ ನಿರಾಶದಾಯಕ ಬಜೆಟ್ : ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*