
ಮಡಿಕೇರಿ ಫೆ.3 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಜಲಜೀವನ್ ಮಿಷನ್ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾಮಗಾರಿಗಳನ್ನು ಪೈಪ್ ಲೈನ್ ಅಳವಡಿಕೆ, ಟ್ಯಾಂಕ್ ನಿರ್ಮಾಣದ ಕಾಮಗಾರಿಗೆ ಕೊಳವೆ ಬಾವಿಯಿಂದ ನೀರು ಎತ್ತಲು ವಿದ್ಯುತ್ ಸೌಲಭ್ಯಗಳ ಜೋಡಣೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಸಧ್ಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಾಲ್ಲೂಕು ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ವೀರೇಂದ್ರ ಕುಮಾರ್ ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಣ್ಣ ಪ್ರಮಾಣದ ಬಾಕಿ ಉಳಿದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಗ್ರಾಮಾಂತರ ಪ್ರದೇಶದ ಜಲಜೀವನ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆಯು ಇದೀಗ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚುರುಕುಗೊಂಡಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖೇನ ಕಳೆದ ಮೂರು ವರ್ಷಗಳಿಂದ ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯು ಇದ್ದಾಗಿದ್ದು, ಇದರ ಅನ್ವಯ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಸಹಕಾರದೊಂದಿಗೆ ಗ್ರಾಮದ ಎಲ್ಲಾ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಈ ಯೋಜನೆ ಇದೀಗ ಸಂಪೂರ್ಣವಾಗಿ ಪೂರ್ಣಗೊಳಿಸುವಲ್ಲಿ ಸಂಬಂಧಿಸಿದ ಇಲಾಖೆಯು ಕಾರ್ಯೋನ್ಮಖರಾಗಿರುತ್ತದೆ ಎಂದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲ್ಲೂಕು ವ್ಯಾಪ್ತಿಯಲ್ಲಿ ಇಲಾಖೆಯ ನಿಯಮಾನುಸಾರ ಕಾಮಗಾರಿ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೊಳ್ಳುವ ಮೂಲಕ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡುವ ಪೈಪ್ ಲೈನ್ ವ್ಯವಸ್ಥೆ, ಮತ್ತು ಅದಕ್ಕೆ ಸಂಬಂಧಿಸಿದ ದೊಡ್ಡ ಪ್ರಮಾಣದ ನೀರು ಸಂಗ್ರಹ ಟ್ಯಾಂಕ್ ಗಳ ನಿರ್ಮಾಣ ಕಾರ್ಯವು ಸಹ ಅಯಾ ವ್ಯಾಪ್ತಿಯ ಗ್ರಾಮಗಳಲ್ಲಿ ಪೂರ್ಣಗೊಂಡು ಈಗಾಗಲೇ ಕೊಳವೆ ಬಾವಿಯಿಂದ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಕಾರ್ಯ ನಡೆಯಲಿದೆ ಎಂದರು. ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯವರು ಇನ್ನೂ ಬಾಕಿ ಇರುವ ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ನಿಯಮಾನುಸಾರ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವ ಕಾರ್ಯ ವನ್ನು ಚುರುಕುಗೊಳಿಸುವಂತೆ ಅನೇಕ ಗ್ರಾಮ ಸಭೆಗಳಲ್ಲಿ ಚರ್ಚೆಗಳು ನಡೆದಿದ್ದವು. ಅದರಂತೆ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಅಧಿಕಾರಿ ವರ್ಗದವರ ಸೂಚನೆಯ ಮುಖೇನ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಇಲಾಖೆಯ ನಿಯಮಾನುಸಾರ ಟೆಂಡರ್ ಪ್ರಕ್ರಿಯೆಯ ಅಡಿಯಲ್ಲಿ ಕಾಮಗಾರಿಗಳು ಚುರುಕುಗೊಂಡಿವೆ. ಈಗಾಗಲೇ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿ ಗಳಲ್ಲಿ ಚಾಲನೆಗೊಂಡಿರುವ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಗ್ರಾಮಾಂತರ ಪ್ರದೇಶದ ಕುಟುಂಬಗಳಿಗೆ ಕುಡಿಯುವ ನೀರನ್ನು ಒದಗಿಸುವ ಕಾರ್ಯದಲ್ಲಿ ಸಂಬಂಧಿಸಿದ ಇಲಾಖೆಯವರು ಇದೀಗ ಮುಂದಾಗಿರುವುದು ಅಲ್ಲದೆ ವಿವಿಧ ಕಾಮಗಾರಿಗಳು ಚುರುಕುಗೊಂಡಿವೆ ಎಂದು ಹೇಳಿದರು.









