
ಮಡಿಕೇರಿ ಫೆ.4 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ, 05 ರಿಂದ 11 ರವರೆಗೆ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ನಡೆಯಲಿದೆ.
ಫೆಬ್ರವರಿ, 5 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರಾದ ಕೆ.ಜ್ಯೋತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಬೆಂಗಳೂರು ದಕ್ಷಿಣ ವಿಭಾಗ/ ವಲಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಯೋಗೀಶ್, ಇತರರು ಪಾಲ್ಗೊಳ್ಳಲಿದ್ದಾರೆ.









